ಚಿತ್ರದುರ್ಗ: ಭ್ರಷ್ಟಾಚಾರ ನಿರ್ಮೂಲನ ನಾಗರಿಕ ಹೋರಾಟ ಸಮಿತಿಯ 8ನೇ ವಾರ್ಷಿಕೋತ್ಸವ ಸಮಾರಂಭ ಮಂಗಳವಾರ ಐಎಂಎ ಸಭಾಂಗಣದಲ್ಲಿ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಉದ್ಘಾಟಿಸಲಿದ್ದು, ಸಮಿತಿ ಸಂಚಾಲಕ ಹಾಗೂ ನೀರಾವರಿ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಮುರುಘರಾಜೆಂದ್ರ ಒಡೆಯರ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷ ಡಿ.ಎಸ್. ಚಿದಾನಂದಪ್ಪ, ಎಂ. ಜಯಣ್ಣ, ಧರಣಿ ಸಂಸ್ಥೆಯ ರಮಾ ನಾಗರಾಜ್ ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಮಾಹಿತಿ ಹಕ್ಕು ಕಾರ್ಯಾಗಾರ ಹಾಗೂ ನ್ಯಾಯ ಬೆಲೆ ಅಂಗಡಿಗಳಿಂದ ಆಹಾರ ಪಡಿತರ ವಿತರಣೆ ಮತ್ತು ಏಜೆನ್ಸಿಗಳಿಂದ ಅಡಿಗೆ ಅನಿಲ ವಿತರಣೆ ಕುರಿತು ಕಾರ್ಯಾಗಾರ ನಡೆಯಲಿದೆ.