ಹರಿಹರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ರೋಡ್ ಷೋ ಮೂಲಕ ನಗರಸಭಾ ಚುನಾವಣೆಗೆ ಸ್ಪರ್ಧಿಸಿರುವ ಕೆಜೆಪಿ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡುವಂತೆ ವಿನಂತಿಸಿದರು.
ನಗರಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಆಗಮಿಸಿದ ಅವರು, ಕ್ಷೇತ್ರನಾಥ ಶ್ರೀ ಹರಿಹರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ದೇವಸ್ಥಾನದ ಆವರಣದಿಂದ ತೆರೆದ ವಾಹನದಲ್ಲಿ ರೋಡ್ ಷೋ ಮೂಲಕ ಮಹತ್ಮಾಗಾಂಧಿ ವೃತ್ತ ಹಾಗೂ ಪಿ.ಪಿ. ರಸ್ತೆಗಳ ಮೂಲಕ ತೆಗ್ಗಿನ ಕೇರಿಗೆ ಸಾಗಿತು.
ನಂತರ ಮಾತನಾಡಿದ ಅವರು ಇತರೆ ಪಕ್ಷಗಳು ಚುನಾವಣೆ ಬೇಡ ಎನ್ನುತ್ತಿದ್ದು, ಕೆಜೆಪಿ ಚುನಾವಣೆಗೆ ಸಿದ್ಧವಾಗಿದ್ದೇವೆ. ಇದಕ್ಕೆ ನಾವು ಅಧಿಕಾರದಲ್ಲಿದ್ದಾಗ ಸ್ಥಳೀಯ ಸಂಘ ಸಂಸ್ಥೆಗಳ ಅಭಿವೃದ್ಧಿಗೆ ಅತ್ಯಂತ ಹೆಚ್ಚು ಒತ್ತು ನೀಡಿದ್ದೆವು. ಇದನ್ನು ಮನಗಂಡ ರಾಜ್ಯದ ಮತದಾರರು ನಮ್ಮ ಪರವಾಗಿದ್ದಾರೆ ಎಂದರು.