ಶೇ.90 ಮಹಿಳೆಯರಿಗೆ ನ್ಯಾಯ ಸಿಗುತ್ತಿಲ್ಲ: ನ್ಯಾ. ಕರೋಶಿ
ಕ.ಪ್ರ.ವಾರ್ತೆ, ಹರಪನಹಳ್ಳಿ, ಮಾ8
ದೇಶದಲ್ಲಿ ದೌರ್ಜನ್ಯಕ್ಕೆ ಒಳಗಾದ ಶೇ.90ರಷ್ಟು ಮಹಿಳೆಯರಿಗೆ ನ್ಯಾಯ ಸಿಗುತ್ತಿಲ್ಲ. ಇದಕ್ಕೆ ಅನಕ್ಷರತೆ, ಬಡತನದಂತಹ ಅಂಶಗಳೇ ಕಾರಣ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಸಿ.ಡಿ. ಕರೋಶಿ ವಿಷಾದ ವ್ಯಕ್ತಪಡಿಸಿದರು.
ಪಟ್ಟಣದ ಬಾಲಕಿಯರ ವಸತಿ ನಿಲಯದಲ್ಲಿ ಶುಕ್ರವಾರ ತಾಲೂಕು ಕಾನೂನು ಸೇವಾ ಸಮಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ನ್ಯಾಯವಾದಿಗಳ ಸಂಘ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಉಳಿಯುವಿಕೆಗೆ ಹೋರಾಟ: ಇಂದು ಮಹಿಳೆ ಹಕ್ಕು ಪಡೆದುಕೊಳ್ಳುವುದಿರಲಿ, ತನ್ನ ಉಳಿಯುವಿಕೆಗಾಗಿ ಹೋರಾಟ ನಡೆಸಬೇಕಾದ ಅನಿವಾರ್ಯತೆ ಇದೆ. ಮಹಿಳೆಯರ ಮೇಲೆ ದೌರ್ಜನ್ಯ ನಡೆದರೆ ಸ್ವಾಭಿಮಾನದ ಸಂಕೇತವಾಗಿ ಜನರು ಕೆರಳುತ್ತಿದ್ದು, ಇದಕ್ಕೆ ದೆಹಲಿ ಘಟನೆಯೇ ಸಾಕ್ಷಿಯಾಗಿದೆ ಎಂದರು.
ಸಿವಿಲ್ ನ್ಯಾಯಾಧೀಶ ಎಚ್.ಕೆ. ನವೀನ್ ಮಾತನಾಡಿದರು.
ವಕೀಲ ಕಣವಿಹಳ್ಳಿ ಮಂಜುನಾಥ್, ಎಂ. ಮೃತ್ಯುಂಜಯ, ಟಿ.ಎಚ್.ಎಂ. ಮಹೇಶ್ ಮಹಿಳೆಯರ ಕಾನೂನು ಕುರಿತು ಉಪನ್ಯಾಸ ನೀಡಿದರು. ಅಂಗನವಾಡಿ ಶಾಲೆ ಮಕ್ಕಳು ಬಾಲ್ಯ ವಿವಾಹ ತಡೆ ಕುರಿತ ನೃತ್ಯ ಗಮನ ಸೆಳೆಯಿತು.
ವಕೀಲರ ಸಂಘದ ಅಧ್ಯಕ್ಷ ಪಿ. ಜಗದೀಶಗೌಡ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಅಭಿಯೋಜಕ ಕೆ.ಸಿ.ದೀಪಕ್, ಸಿಡಿಪಿಒ ಆರ್. ಸಿದ್ದೇಶಪ್ಪ, ವಾರ್ಡನ್ ಬಸವರಾಜ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

