ಎಲ್ಲಾ ಕ್ಷೇತ್ರ ಆವರಿಸಿದ ಭ್ರಷ್ಟಾಚಾರ
ಕಪ್ರ ವಾರ್ತೆ, ದಾವಣಗೆರೆ, ಮಾ.9
ಕೌಟಿಲ್ಯನ ಕಾಲದಿಂದಲೂ ಕೆಲವೊಂದು ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿದ್ದ ಭ್ರಷ್ಟಾಚಾರ ಇಂದು ಶಿಕ್ಷಣ, ಆರೋಗ್ಯ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ತಾಂಡವವಾಡುತ್ತಿದೆ ಎಂದು ದಾವಣಗೆರೆ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಎಸ್. ಇಂದುಮತಿ ವಿಷಾದಿಸಿದರು.
ನಗರದ ಎವಿಕೆ ಮಹಿಳಾ ಕಾಲೇಜಿನಲ್ಲಿ ಶನಿವಾರ ಯುಜಿಸಿ ಪ್ರಾಯೋಜಕತ್ವದಲ್ಲಿ ರಾಜ್ಯಶಾಸ್ತ್ರ ವಿಭಾಗ ಹಮ್ಮಿಕೊಂಡಿದ್ದ ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ, ಭ್ರಷ್ಟಾಚಾರದ ಪಿಡುಗನ್ನು ನಿಯಂತ್ರಿಸುವಲ್ಲಿ ನಾಗರಿಕ ಸಮಾಜದ ಸಕ್ರಿಯ ಪಾಲ್ಗೊಳ್ಳುವಿಕೆಯ ಅಗತ್ಯತೆ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
ಭ್ರಷ್ಟಾಚಾರವೆಂಬ ಸಾಮಾಜಿಕ ಪಿಡುಗು ಇಂದು, ನಿನ್ನೆಯದಂತೂ ಅಲ್ಲ. ಹಿಂದೆಲ್ಲಾ ಸೀಮಿತ ಕ್ಷೇತ್ರಗಳಲ್ಲಿ ಮಾತ್ರ ಭ್ರಷ್ಟಾಚಾರವಿತ್ತು. ಇತ್ತೀಚಿನ ದಿನಗಳಲ್ಲಿ ಶಿಕ್ಷಣ, ಆರೋಗ್ಯ, ಸೌಲಭ್ಯ ಹೀಗೆ ಪ್ರತಿ ಕ್ಷೇತ್ರವನ್ನೂ ಭ್ರಷ್ಟಾಚಾರ ಆವರಿಸಿದೆ. ಸ್ವಾತಂತ್ರ್ಯ ಲಭಿಸಿ, ಐದಾರು ದಶಕಗಳೇ ಕಳೆದರೂ ಭ್ರಷ್ಟಾಚಾರ ನಿರ್ಮೂಲನೆಗಾಗಿ ಯಾವುದೇ ಬದಲಾವಣೆ ಕಂಡು ಬರುತ್ತಿಲ್ಲ ಎಂದು ವಿಷಾದಿಸಿದರು.
ಲಂಚ ನೀಡಬೇಡಿ: ಬಾಪೂಜಿ ವಿದ್ಯಾಸಂಸ್ಥೆ ಖಜಾಂಚಿ ಎ.ಸಿ. ಜಯಣ್ಣ ಮಾತನಾಡಿ, ಮನಃಪರಿವರ್ತನೆ ಮಾಡುವ ಮೂಲಕ ಲಂಚದ ಹಣಕ್ಕೆ ಕೈಯೊಡ್ಡುವುದಿಲ್ಲ ಎಂಬ ಬದಲಾವಣೆಯೂ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಕ್ಷೇತ್ರದ ಅಧಿಕಾರಿ, ನೌಕರರಲ್ಲಿ ಬರಬೇಕು. ಜನತೆಯೂ ಲಂಚ ನೀಡದೆ ತನ್ನ ಕೆಲಸ ಮಾಡಬೇಕು ಎಂಬುದಾಗಿ ಪಟ್ಟು ಹಿಡಿಯಬೇಕು ಎಂದರು.
ಎವಿಕೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಪ್ರೊ.ಕೆ.ಎಸ್. ಹನುಮಂತಪ್ಪ ಅಧ್ಯಕ್ಷತೆ ವಹಿಸಿದ್ದರು. ಬಾಪೂಜಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸದಸ್ಯ ಕಿರುವಾಡಿ ಗಿರಿಜಮ್ಮ, ಕಾನೂನು ತಜ್ಞ ಪ್ರೊ.ಎಸ್.ಎಚ್. ಪಟೇಲ್, ವಿಚಾರವಾದಿ ಪ್ರೊ.ಬಿ.ವಿ. ವೀರಭದ್ರಪ್ಪ, ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ.ಸಿ.ಎಚ್. ಮುರಿಗೇಂದ್ರಪ್ಪ ಇತರರು ಇದ್ದರು.
ಮೈಸೂರು ವಿಶ್ವವಿದ್ಯಾನಿಲಯದ ಪ್ರೊ.ಎಚ್.ಎಂ. ರಾಜಶೇಖರ ಭ್ರಷ್ಟಾಚಾರದ ಪಿಡುಗನ್ನು ನಿಯಂತ್ರಿಸುವಲ್ಲಿ ನಾಗರಿಕ ಸಮಾಜದ ಸಕ್ರಿಯ ಪಾಲ್ಗೊಳ್ಳುವಿಕೆಯ ಅಗತ್ಯತೆ ಕುರಿತು ಉಪನ್ಯಾಸ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

