ಮತ ಎಣಿಕೆಗೆ ಸಜ್ಜುಗೊಂಡ ತಾಲೂಕು ಕಚೇರಿ
ಚಳ್ಳಕೆರೆ: ಮತ ಎಣಿಕೆ ಸೋಮವಾರ ಬೆಳಿಗ್ಗೆ 8.30ಕ್ಕೆ ಇಲ್ಲಿನ ತಾಲೂಕು ಕಚೇರಿ ಆವರಣದಲ್ಲಿ ನಡೆಯಲಿದ್ದು, ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ತಹಸೀಲ್ದಾರ್ ಡಿ.ಕೆ. ರಾಮಚಂದ್ರಪ್ಪ ತಿಳಿಸಿದರು.
ವಿವಿಧ ಪಕ್ಷಗಳ ಮುಖಂಡರು ಹಾಗೂ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆ ಇದ್ದು, ತಾಲೂಕು ಕಚೇರಿ ಸುತ್ತ ಬಲವಾದ ಪೊಲೀಸ್ ಕಾವಲನ್ನು ನಿಯೋಜಿಸಾಗಿದೆ. ಈಗಾಗಲೇ ತಾಲೂಕು ಕಚೇರಿಯ ಕಾಂಪೌಡ್‌ಗೆ ಎತ್ತರವಾಗಿ ಗಳ ಕಟ್ಟಿ ಸಾರ್ವಜನಿಕರು ಒಳ ಪ್ರವೇಶಿಸದಂತೆ ನಿರ್ಬಂಧಿಸಲಾಗಿದೆ ಎಂದರು.
ಸೋಮವಾರ ಬೆಳಿಗ್ಗೆಯಿಂದಲೇ ತಾಲ್ಳುಕು ಕಚೇರಿಗೆ ಆಗಮಿಸುವ ಎಲ್ಲಾ ದ್ವಾರಗಳನ್ನು ಬಂದ್ ಮಾಡಿ ಕೇವಲ ಒಂದೇ ದ್ವಾರದಿಂದ ಪ್ರವೇಶಕ್ಕೆ ಅವಕಾಶ ಮಾಡಲಾಗಿದೆ. ಪ್ರವೇಶ ದ್ವಾರದಲ್ಲಿ ಅಭ್ಯರ್ಥಿಯ ಗುರುತಿನ ಚೀಟಿ ಇರುವವರಿಗೆ ಮಾತ್ರ ಪ್ರವೇಶ.
ಮತಗಳ ಎಣಿಕೆ ಸಮಯದಲ್ಲಿ ಯಾವುದಾದರೂ ಅನುಮಾನವಿದ್ದಲ್ಲಿ ಕೂಡಲೆ ಮೇಲ್ವಿಚಾರಕರನ್ನು ಸಂಪರ್ಕಿಸಲು ಅವಕಾಶ ನೀಡಲಾಗಿದೆ. ಮತಗಳ ಎಣಿಕೆ ಕ್ಷೀಪ್ರ ಗತಿಯಲ್ಲಿ ನಡೆಯಲಿದೆ.
ಅಭ್ಯರ್ಥಿಗಳು ಹಾಗೂ ವಿವಿಧ ಪಕ್ಷಗಳ ಮುಖಂಡರು ಅನಗತ್ಯ ತೊಂದರೆ ಉಂಟುಮಾಡದಂತೆ ಸಹಕರಿಸಲು ವಿನಂತಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

