ದಾವಣಗೆರೆ

ದೂರನ್ನು ಗಂಭೀರವಾಗಿ ಪರಿಗಣಿಸಿ

Published On :

ಕ.ಪ್ರ.ವಾರ್ತೆ, ಚನ್ನಗಿರಿ.ಮಾ.16
ಮಹಿಳೆಯರ ಮೇಲಿನ ದೌರ್ಜನ್ಯದಂತಹ ದೂರುಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಚಂದ್ರಮಲ್ಲೇಗೌಡ ಹೇಳಿದರು.
ಅವರು ಶನಿವಾರ ಇಲ್ಲಿನ ಹಾಲಸ್ವಾಮಿ ಸಮುದಾಯ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಪೊಲೀಸ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪೊಲೀಸ್ ಸಿಬ್ಬಂದಿಗೆ
ಕಾನೂನು ತಿಳಿವಳಿಕೆ ಕುರಿತಂತೆ ನಡೆದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಅಪರಾಧಿಗೆ ಶಿಕ್ಷೆ: ಯಾವುದೇ ದೂರು ದಾಖಲಾದರೂ ಸತ್ಯಾಸತ್ಯತೆ ಪರೀಕ್ಷಿಸಿ ಕಾನೂನು ರೀತ್ಯಾ ಕೇಸು ದಾಖಲಿಸಿಕೊಂಡಾಗ  ನಿಜವಾದ ಅಪರಾಧಿಗೆ ಶಿಕ್ಷೆಯಾಗುವುದು. ಆ ನಿಟ್ಟಿನಲ್ಲಿ ವಿಷಯ ತಿಳಿಯಲು ಇಂತಹ ಕಾರ್ಯಾಗಾರ  ಸಹಕಾರಿಯಾಗಲಿವೆ ಎಂದರು.
ಅಧ್ಯಕ್ಷತೆಯನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬಿ.ಟಿ. ಚೌವ್ಹಾಣ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಅಣ್ಣು ಗೌಡ ವಿ ಪಾಟೀಲ, ನ್ಯಾಯವಾದಿ ಸಂಘದ ಅಧ್ಯಕ್ಷ ವೈ.ಎಂ. ರಾಮಚಂದ್ರ ರಾವ್, ತಹಸೀಲ್ದಾರ್ ಎಚ್.ಎಂ. ರೇವಣಸಿದ್ದಪ್ಪ, ಪೊಲೀಸ್  ಉಪ ಅಧೀಕ್ಷಕ ಕವಳಪ್ಪ ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ತನಿಖೆ ಕುರಿತಂತೆ ಸರ್ಕಾರಿ ಅಭಿಯೋಜಕ ಬಣಕಾರ್ ವಿಧಿ ವಿಜ್ಞಾನ ವಿಷಯ ಕುರಿತಂತೆ ಲಿಂಗೇಗೌಡ ಉಪನ್ಯಾಸ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.