ದಾವಣಗೆರೆ: ಮುಂಗಾರು 2014ರ ಹಂಗಾಮಿನಲ್ಲಿ ರಾಜ್ಯದಲ್ಲಿ ಮಾರ್ಪಡಿಸಿದ ರಾಷ್ಟ್ರೀಯ ಕೃಷಿ ವಿಮಾ ಯೋಜನೆಯಡಿ ಹಾಗೂ ಹವಾಮಾನ ಆಧಾರಿತ ಬೆಳೆವಿಮಾ ಯೋಜನೆಯಡಿ ಎಲ್ಲಾ ವರ್ಗದ ರೈತರು ಪಾಲ್ಗೊಳ್ಳಲು ಆ.31 ಅಂತಿಮ ದಿನ. ಬೆಳೆಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ ಪಾಸ್ ಪುಸ್ತಕ, ಕಂದಾಯ ರಸೀದಿ ನೀಡಬೇಕು. ಬೆಳೆ ವಿಮೆಗೆ ಬ್ಯಾಂಕ್ ಖಾತೆ ಕಡ್ಡಾಯವಾಗಿದ್ದು, ರಾಷ್ಟ್ರೀಕೃತ ಬ್ಯಾಂಕ್ ಅಥವಾ ಸೊಸೈಟಿ ಬ್ಯಾಂಕ್ ಖಾತೆಯ ಜೆರಾಕ್ಸ್ ಪ್ರತಿ ನೀಡಬೇಕು. ಮಾಹಿತಿಗೆ ಜಂಟಿ ನಿರ್ದೇಶಕರು, ಕೃಷಿ ಇಲಾಖೆ, ದಾವಣಗೆರೆ ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ಕೋರಿದೆ.