ದಾವಣಗೆರೆ: ದಾವಣಗೆರೆ, ಹರಪನಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸುತ್ತಿದ್ದ ಪ್ರದೇಶಗಳ ಮೇಲೆ ದಾಳಿ ನಡೆಸಿ, ಒಟ್ಟು 26 ಜನರ ಮೇಲೆ ಹಿರಿಯ ಭೂ ರ್ವಿಜನಿಗಳು, ತಾಂತ್ರಿಕ ಅಧಿಕಾರಿಗಳು, ಕಂದಾಯ, ಪೊಲೀಸ್ ಅಧಿಕಾರಿಗಳ ತಂಡವು ಮೊಕದ್ದಮೆ ದಾಖಲಿಸಿದೆ.
ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಭೂ ವಿಜ್ಞಾನಿ ಮತ್ತು ತಾಂತ್ರಿಕ ಅಧಿಕಾರಿಗಳನ್ನು ಒಳಗೊಂಡ ವಿವಿಧ ಇಲಾಖೆ ತಂಡಗಳು ಕಾರ್ಯಾಚರಣೆ ನಡೆಸಿ, ನಿಯಮ ಉಲ್ಲಂಘಿಸಿ, ಗಣಿಗಾರಿಕೆಯಲ್ಲಿ ತೊಡಗಿದ್ದ ಹರಪನಹಳ್ಳಿ ತಾಲೂಕಿನ 14 ಜನ ಹಾಗೂ ದಾವಣಗೆರೆ ತಾಲೂಕಿನ 12 ಜನರ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ.
ಯಾವುದೇ ಅನಧಿಕೃತ ಅಥವಾ ನಿಯ ಮ ಬಾಹಿರ ಗಣಿಗಾರಿಕೆ ಕಾನೂನಿಗೆ ವಿರುದ್ಧವಾಗಿದ್ದು, ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ನಿಯಮ ಬಾಹಿರವಾಗಿ ಕಲ್ಲು ಗಣಿಗಾರಿಕೆ ಯಲ್ಲಿ ತೊಡಗಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.
ಲೋಕಾಯುಕ್ತ ನ್ಯಾಯಮೂರ್ತಿ ಪ್ರವಾಸ: ಅರ್ಜಿ ಸ್ವೀಕಾರ
ದಾವಣಗೆರೆ: ಲೋಕಾಯುಕ್ತ ನ್ಯಾಯಮೂರ್ತಿ ಡಾ.ವೈ.ಭಾಸ್ಕರರಾವ್ 22 ರಂದು ಬೆಳಗ್ಗೆ 10.30ಕ್ಕೆ ಜಿಲ್ಲೆಯ ವ್ಯಾಪ್ತಿಯ ಅರ್ಜಿಗಳು ಮತ್ತು ಸಾರ್ವಜನಿಕ ದೂರು ಅರ್ಜಿಗಳ ವಿಚಾರಣೆ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಜಿಲ್ಲೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಿ, ವಿಲೆ ಮಾಡುವರು. ಲೋಕಾಯುಕ್ತ ಕಚೇರಿಯ ನಿಬಂಧಕ ಎಚ್.ಆರ್. ದೇಶಪಾಂಡೆ ಸಹ ಆಗಮಿಸುವರು.
Advertisement