ದಾವಣಗೆರೆ: ಬಾಪೂಜಿ ಮಕ್ಕಳ ಆರೋಗ್ಯ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಸಭಾಂಗಣದಲ್ಲಿ ಆ.7 ರಂದು ವಿವೇಕ್ ಪೋಷಕರ ಆರೋಗ್ಯ ಕಾರ್ಯಾಗಾರದಲ್ಲಿ 22ನೇ ಜಾಗತಿಕ ಸ್ತನ್ಯಪಾನ ಸಪ್ತಾಹ ಸಮಾರೋಪ ಹಾಗೂ ಒಆರ್‌ಎಸ್ ಪಾನಕದ ಮಹತ್ವ ವಿಷಯವಾಗಿ ನಡೆಯಲಿದೆ. ಮಧ್ಯಾಹ್ನ 3.30 ಗಂಟೆಗೆ ಅಖಿಲ ಭಾರತ ಮಕ್ಕಳ ತಜ್ಞರ ಸಂಘದ ಅಧ್ಯಕ್ಷ, ಮಕ್ಕಳ ವಿಭಾಗದ ಪ್ರಾಧ್ಯಾಪಕ ಡಾ. ಎಸ್.ಎಸ್. ಪ್ರಕಾಶ ಉಪನ್ಯಾಸ ನೀಡಲಿದ್ದಾರೆ. ಸಾರ್ವಜನಿಕರು ಪಾಲ್ಗೊಳ್ಳಲು ಬಿಸಿಎಚ್‌ಐ ನಿರ್ದೇಶಕರು ಮನವಿ ಮಾಡಿದ್ದಾರೆ.
Advertisement