ಹರಪನಹಳ್ಳಿ: ವಿವಿಧ ಸೌಲಭ್ಯಗಳಿಗೆ ಸರ್ಕಾರವನ್ನು ಆಗ್ರಹಿಸಿ ಕಟ್ಟಡ ಹಾಗೂ ಕ್ವಾರಿ ಕಾರ್ಮಿಕರು ಜು.19 ರಂದು ಶನಿವಾರ ಬೆಳಗ್ಗೆ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಕಟ್ಟಡ ಕಾರ್ಮಿಕರ ತಾಲೂಕು ಘಟಕದ ಪ್ರದಾನ ಕಾರ್ಯದರ್ಶಿ ಗುಡಿಹಳ್ಳಿ ಹಾಲೇಶ್ ಅವರು ಬೆಳಗ್ಗೆ 11 ಗಂಟೆಗೆ ಪ್ರವಾಸಿ ಮಂದಿರದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಹೇಳಿದರು.