ವಿಧಾನಪರಿಷತ್ತು: ಶಿವಮೊಗ್ಗದ ಸೊರಬ ತಾಲೂಕಿನ ಜಡೆ ಗ್ರಾಮಕ್ಕೆ 110/11 ಕೆವಿ ವಿದ್ಯುತ್ ಉಪ ಕೇಂದ್ರದ ಕಾಮಗಾರಿ ಕೆಲವು ತಾಂತ್ರಿಕ ಕಾರಣದಿಂದ ವಿಳಂಬವಾಗಿದೆ. ಈ ಪ್ರದೇಶದಲ್ಲಿ ವಿದ್ಯುತ್ ಕೊರತೆ ಹೆಚ್ಚಾಗಿರುವುದರಿಂದ 15 ದಿನದಲ್ಲಿ ಶಾರ್ಟ್ ಟೈಮ್ ಟೆಂಡರ್ ಕರೆದು ಕೂಡಲೇ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಸದಸ್ಯ ಆರ್.ಕೆ. ಸಿದ್ದರಾಮಣ್ಣ ಅವರ ಪ್ರಶ್ನೆಗೆ ಉತ್ತರಿಸಿದ್ದಾರೆ. ಈ ಕಾಮಗಾರಿಗೆ ಮೂರು ಬಾರಿ ಟೆಂಡರ್ ಕರೆಯಲಾಗಿತ್ತು. ತಾಂತ್ರಿಕ ಕಾರಣದಿಂದ ಎರಡು ಬಾರಿ ಟೆಂಡರ್ ತಿರಸ್ಕೃತವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.