ದಾವಣಗೆರೆ: ಎಸ್ಸೆನ್ ಲೇಔಟ್ನಲ್ಲಿ ನಿರ್ಮಿಸಿರುವ ಗ್ರಂಥಾಲಯ ಉಪ ನಿರ್ದೇಶಕರ ಕಚೇರಿ, ಆಂಜನೇಯ ಬಡಾವಣೆ ಪಾಲಿಕೆ ಪಾರ್ಕ್ನಲ್ಲಿ ಶಾಖಾ ಗ್ರಂಥಾಲಯ ಉದ್ಘಾಟನಾ ಸಮಾರಂಭ ಜು.27ರಂದು ಸಂಜೆ 4ಕ್ಕೆ ಆಂಜನೇಯ ಬಡಾವಣೆ ಪಾರ್ಕ್ನಲ್ಲಿ ನಡೆಯಲಿದೆ. ಶಾಸಕ ಎಸ್.ಎಸ್.ಲ್ಲಿಕಾರ್ಜುನ ಅಧ್ಯಕ್ಷತೆಯಲ್ಲಿ ಸಚಿವ ಡಾ. ಶಾಮನೂರು ಶಿವಶಂಕರಪ್ಪ ಕಟ್ಟಡ ಉದ್ಘಾಟಿಸುವರು. ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ, ಸಚಿವರಾದ ಕಿಮ್ಮನೆ ರತ್ನಾಕರ ಇತರರು ಭಾಗವಹಿಸಲಿದ್ದಾರೆ.
ಸರ್ ಎಂವಿ ಕಾಲೇಜು ಸಮಾರಂಭ ಇಂದು: ಇಲ್ಲಿನ ಸರ್ ಎಂ.ವಿ. ಪಿಯು ಕಾಲೇಜಿನ ನೂತನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ ಜು.27ರಂದು ನಗರದ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಕಾಲೇಜು ಕಾರ್ಯದರ್ಶಿ ಎಸ್.ಜೆ. ಶ್ರೀಧರ್ ಅಧ್ಯಕ್ಷತೆಯಲ್ಲಿ ರಂಗನಾಥ ಭಾರದ್ವಾಜ್, ರಾಧಿಕಾ ಭಾರದ್ವಾಜ್, ನಿವೃತ್ತ ಜಿಲ್ಲಾ ಪೊಲೀಸ್ ವರಿಷ್ಠ ರವಿನಾರಾಯಣ ಭಾಗವಹಿಸುವರು. ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಕಾಲೇಜಿನ ಪ್ರಾಚಾರ್ಯರು ತಿಳಿಸಿದ್ದಾರೆ.