ಧಾರವಾಡ

ಎಸ್ಸೆಸ್ಸೆಲ್ಸಿ: 26 ಸಾವಿರ ಮಕ್ಕಳು ಹಾಜರ್

Published On :

ಹುಬ್ಬಳ್ಳಿ: ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟ ಎಂದು ಪರಿಗಣಿಸಲ್ಪಟ್ಟ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರದಿಂದ ಆರಂಭವಾಗಿದ್ದು, ಜಿಲ್ಲೆಯ 92 ಪರೀಕ್ಷಾ ಕೇಂದ್ರಗಳಲ್ಲಿ 26,257 ವಿದ್ಯಾರ್ಥಿಗಳು ಪ್ರಥಮ ಭಾಷೆ ಪರೀಕ್ಷೆ ಬರೆದಿದ್ದಾರೆ. ಒಟ್ಟು 538 ವಿದ್ಯಾರ್ಥಿಗಳು ಗೈರಾಗಿದ್ದರು.
  ಸೋಮವಾರ ವಿದ್ಯಾರ್ಥಿಗಳು ಪ್ರಥಮ ಭಾಷೆ, ಕನ್ನಡ, ಹಿಂದಿ, ತೆಲುಗು, ಮರಾಠಿ, ಉರ್ದು ಮತ್ತು ಇಂಗ್ಲಿಷ್ ಪರೀಕ್ಷೆಗೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಆಯಾ ಭಾಷಾ ಪ್ರಶ್ನೆಗಳಿಗೆ ಉತ್ತರಿಸುವ ಯತ್ನ ಮಾಡಿದ್ದಾರೆ.
ಪ್ರಥಮ ಬಾರಿಗೆ ಬೋರ್ಡ್ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳಲ್ಲಿ ಕುತೂಹಲ ಬೆರೆತ ಆತಂಕ ಮನೆ ಮಾಡಿತ್ತು. ಹೇಗೋ ಏನೋ ಎನ್ನುತ್ತಲೇ ಪರೀಕ್ಷಾ ಕೇಂದ್ರಕ್ಕೆ ನಿಗದಿತ ಅವಧಿಗಿಂತ ಒಂದು ಗಂಟೆ ಮುಂಚಿತವಾಗಿ ಆಗಮಿಸಿದ್ದ ವಿದ್ಯಾರ್ಥಿಗಳು ಸಹ ವಿದ್ಯಾರ್ಥಿಗಳೊಂದಿಗೆ ಪ್ರಶ್ನೆಗಳಿಗೆ ಉತ್ತರಿಸಬೇಕಾದ ರೀತಿ, ಮಾಡಿಕೊಂಡಿರುವ ಸಿದ್ಧತೆ ಬಗ್ಗೆ ಚರ್ಚಿಸುತ್ತಿದ್ದರು. ಇನ್ನೂ ಕೆಲವು ವಿದ್ಯಾರ್ಥಿಗಳು ಯುದ್ಧ ಕಾಲೇ ಶಸ್ತ್ರಾಭ್ಯಾಸ ಎನ್ನುವಂತೆ ಕೊನೆ ಕ್ಷಣದವರೆಗೂ ಮರದ ನೆರಳಿನಲ್ಲೋ ಅಥವಾ ಕಾಂಪೌಂಡ್ ಮೇಲೋ ಕುಳಿತು ಪುಸ್ತಕ ತಿರುವಿ ಹಾಕುತ್ತಿದ್ದುದು ಸಾಮಾನ್ಯವಾಗಿತ್ತು.
ಧಾರವಾಡ ಮತ್ತು ಹುಬ್ಬಳ್ಳಿ ನಗರದ ವಿವಿಧ ಶೈಕ್ಷಣಿಕ ಮತ್ತು ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಪ್ರಥಮ ಭಾಷೆ ಪರೀಕ್ಷೆ ಬರೆದಿದ್ದಾರೆ.
ಪರೀಕ್ಷೆ ಸುಗಮ: ಸೋಮವಾರ ನಡೆದ ಪ್ರಥಮ ಭಾಷೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ಮಾಹಿತಿ ನೀಡಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಬಿ.ಕೆ.ಎಸ್. ವರ್ಧನ್ ಜಿಲ್ಲಾದ್ಯಂತ ಯಾವುದೇ ಅಹಿತಕರ ಘಟನೆಗಳು ಜರುಗಿಲ್ಲ. ಯಾವುದೇ ವಿದ್ಯಾರ್ಥಿ ಡಿಬಾರ್ ಆಗಿಲ್ಲ ಎಂದು ತಿಳಿಸಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.