ಧಾರವಾಡ

ಶಿಲ್ಪಾ ಸೆಂಟ್ರಲ್‌ನಲ್ಲಿ, ಶೆಟ್ಟರ್ ರಾಜ್ಯದಲ್ಲಿ ಪ್ರಚಾರ

Published On :

ಹುಬ್ಬಳ್ಳಿ:  ಬಿಜೆಪಿ ಗೆಲವಿಗೆ ಪತಿರಾಯರು ಇಡೀ ರಾಜ್ಯ ಸುತ್ತುತ್ತಿದ್ದರೆ, ಅವರ ಗೆಲವಿಗೆ ಇಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ನಲ್ಲಿ ಅವರ ಶಿಲ್ಪಾ ಶೆಟ್ಟರ್, ಬೆಳಗ್ಗೆಯಿಂದಲೇ ಮನೆ ಮನೆಗೆ ತೆರಳಿ ಪತಿ ಜಗದೀಶ ಶೆಟ್ಟರ್ ಮತ್ತು ಪರೋಕ್ಷವಾಗಿ ಬಿಜೆಪಿಯ ಗೆಲವಿಗೂ ಓಡಾಡುತ್ತಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಬಾಗಲಕೋಟೆಯಲ್ಲಿ ವಿದ್ಯುಕ್ತವಾಗಿ ಉದ್ಘಾಟನೆಗೊಂಡ ಬಿಜೆಪಿಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡಿರುವ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ನಂತರ ಬೆಳಗಾವಿ ಸೇರಿದಂತೆ ವಿವಿಧೆಡೆ ಪಕ್ಷದ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಅವರ ಸ್ವಕ್ಷೇತ್ರದಲ್ಲಿ ಗೆಲುವು ಸಾಧಿಸುವುದರ ಜೊತೆಗೆ ಅವಳಿ ನಗರ ವ್ಯಾಪ್ತಿಯ ಇನ್ನೆರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಾದ ಗುರುತರ ಜವಾಬ್ದಾರಿ ಅವರ ಮೇಲಿದ್ದು, ಈ ಅಭ್ಯರ್ಥಿಗಳ ಗೆಲವು ಅವರ ರಾಜಕೀಯ ಭವಿಷ್ಯಕ್ಕೆ ದಿಕ್ಸೂಚಿಯಾಗುವುದಂತು ಖಚಿತ. ಈ ಎಲ್ಲ ಅಂಶಗಳನ್ನು ಗಣನೆಗೆ ತೆಗೆದುಕೊಂಡಿರುವ ಶಿಲ್ಪಾ ಶೆಟ್ಟರ್ ಅವರು ಹು-ಧಾ ಸೆಂಟ್ರಲ್ ಕ್ಷೇತ್ರದಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮನೆ ಮನೆಗಳಿಗೆ ಪಕ್ಷದ ಮಹಿಳಾ ಕಾರ್ಯಕರ್ತರೊಂದಿಗೆ ತೆರಳಿ ಕ್ಷೇತ್ರದ ನಿವಾಸಿಗಳಲ್ಲಿ ಬಿಜೆಪಿಗೆ ಅದರಲ್ಲೂ ತಮ್ಮ ಪತಿ ಜಗದೀಶ ಶೆಟ್ಟರ್ ಅವರಿಗೆ ಮತ ನೀಡಿ ಆಶೀರ್ವದಿಸುವಂತೆ ವಿನಂತಿಸಿಕೊಳ್ಳುತ್ತಿದ್ದಾರೆ.  ಭಾನುವಾರ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಇವರ ಪರವಾಗಿ ಶಿಲ್ಪಾ ಶೆಟ್ಟರ್ ವಾರ್ಡ್ ನಂ.35ರ ಅಕ್ಷಯ ಕಾಲೋನಿಯಲ್ಲಿ ಚುನಾವಣಾ ಪಾದಯಾತ್ರೆ ಮಾಡಿ ಮತ ಯಾಚಿಸಿದರು.
ಪ್ರತಿದಿನ ಬೆಳಗ್ಗೆ ಶುರುವಾಗುವ ಶಿಲ್ಪಾ ಶೆಟ್ಟರ್ ಅವರ ಪ್ರಚಾರ ಪಾದಯಾತ್ರೆ ಹುಬ್ಬಳ್ಳಿಯ ಖಡಕ್ ಬಿಸಿಲು ಲೆಕ್ಕಿಸದೇ ಮುಂದುವರಿಯುತ್ತಿದೆ. ಇಳಿ ಸಂಜೆ ಮತ್ತೆ ಪ್ರಚಾರಕ್ಕೆ ಇಳಿಯುವ ಶಿಲ್ಪಾ ಶೆಟ್ಟರ ಆದಷ್ಟು ಮಹಿಳಾ ಮತದಾರರನ್ನು ಬಿಜೆಪಿಯತ್ತ ಒಲಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಸಾಥ್ ನೀಡುವುದಕ್ಕೆ ಎಂದು ಬಿಜೆಪಿ ಮಹಿಳಾ ಘಟಕದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಇದ್ದು, ಜಗದೀಶ ಶೆಟ್ಟರ್ ಆಡಳಿತಾವಧಿಯಲ್ಲಿ ಅವಳಿ ನಗರದ ಅಭಿವೃದ್ಧಿ ಸೇರಿದಂತೆ ರಾಜ್ಯದ ಅಭಿವೃದ್ಧಿ ಮಾಹಿತಿ ಇರುವ ಕರಪತ್ರಗಳನ್ನು ನೀಡುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.