81 ಹೆಚ್ಚುವರಿ ಮತಕೇಂದ್ರ ಸ್ಥಾಪನೆಗೆ ಪ್ರಸ್ತಾವನೆ
ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಜರುಗಲಿರುವ ಏಳು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ನಿಯಮಿಸಿ ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದೆ.
ಈಗಾಗಲೇ ಇರುವ 1,346 ಮತಕೇಂದ್ರಗಳ ಹೊರತಾಗಿ 81 ಹೆಚ್ಚುವರಿ ಕೇಂದ್ರ ಸ್ಥಾಪಿಸಲು ಆಯೋಗಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಮೀರ್ ಶುಕ್ಲ ತಿಳಿಸಿದ್ದಾರೆ.
ನವಲಗುಂದ ವಿಧಾನಸಭಾ ಕ್ಷೇತ್ರಕ್ಕೆ ಜಂಟಿ ಕೃಷಿ ನಿರ್ದೇಶಕ ಎಸ್.ಎಂ. ಗಡಾದ, ಕುಂದಗೋಳ-ಜಿಪಂ ಉಪಕಾರ್ಯದರ್ಶಿ ಎಸ್.ಬಿ. ಮುಳ್ಳೊಳ್ಳಿ, ಧಾರವಾಡ-ಉಪವಿಭಾಗಾಧಿಕಾರಿ ಮಹೇಶ ಕರ್ಜಗಿ, ಹು-ಧಾ ಪೂರ್ವ-ಆಹಾರ ಇಲಾಖೆ ಉಪನಿರ್ದೇಶಕ ಕೆ.ಎಸ್. ಕಲ್ಲನಗೌಡ್ರ, ಹು-ಧಾ ಕೇಂದ್ರ-ಪಾಲಿಕೆ ಆಯುಕ್ತ ವೈ.ಎಸ್. ಪಾಟೀಲ. ಹು-ಧಾ ಪಶ್ಚಿಮ-ಹೆಸ್ಕಾಂ ಜನರಲ್ ಮ್ಯಾನೇಜರ್ ಡಾ. ಸತೀಶ ಬಿ.ಸಿ. ಹಾಗೂ ಕಲಘಟಗಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಯಾಗಿ ವಿಶೇಷ ಭೂಸ್ವಾಧೀನಾಧಿಕಾರಿ ವಿಜಯಕುಮರ ಹೊನಕೇರಿ ನೇಮಕಗೊಂಡಿದ್ದಾರೆ.
ಹು-ಧಾ ಕೇಂದ್ರಕ್ಕೆ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಎ.ಎನ್. ರಾಮದಾಸ್, ಹು-ಧಾ ಪಶ್ಚಿಮ-ಧಾರಡಾಡ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎಚ್. ಬಂಡಿ ಅವರು ಸಹಾಯಕ ಚುನಾವಣಾಧಿಕಾರಿಯಾಗಿದ್ದು, ಹು-ಧಾ ಪೂರ್ವಕ್ಕೆ ಹುಬ್ಬಳ್ಳಿ ತಹಸೀಲ್ದಾರರು ಹಾಗೂ ನವಲಗುಂದ ಕುಂದಗೋಳ, ಧಾರವಾಡ ಹಾಗೂ ಕಲಘಟಗಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಗಳಾಗಿ ಆಯಾ ತಾಲೂಕಿನ ತಹಸೀಲ್ದಾರರನ್ನು ನೇಮಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 20ರಂತೆ ಒಟ್ಟು 140 ಸೆಕ್ಟೊರಲ್ ಅಧಿಕಾರಿಗಳನ್ನು ನಿಯಮಿಸಲಾಗಿದ್ದು ಅವರಿಗೆ ಅಗತ್ಯದ ತರಬೇತಿ ನೀಡಲಾಗಿದೆ. ಜಿಲ್ಲೆಯಲ್ಲಿನ ಒಟ್ಟು 12,71,487 ಮತದಾರರ ಪೈಕಿ 21,674 ಜನರ ಭಾವಚಿತ್ರ ಅಳವಡಿಸುವುದು ಬಾಕಿ ಇದ್ದು ಆ ಕಾರ್ಯ ಪೂರ್ಣಗೊಳಿಸಲು ಸಂಬಂಧಿತ ಮತದಾರರು ಪಟ್ಟಿ ಪರಿಶೀಲಿಸಿ ಭಾವಚಿತ್ರ ಒದಗಿಸಲು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

