ಜನ ಸಂಗ್ರಾಮ ಪರಿಷತ್ನಿಂದ ಮತದಾರರಲ್ಲಿ ಜಾಗೃತಿ
ಧಾರವಾಡ: ಪ್ರಸಕ್ತ ಚುನಾವಣೆಯಲ್ಲಿ ಭ್ರಷ್ಟಾಚಾರ, ಅನೈತಿಕತೆ ಹಾಗೂ ಭೂಗಳ್ಳರನ್ನು ಆಯ್ಕೆ ಮಾಡದೆ ಸಜ್ಜನ ಹಾಗೂ ಅತ್ಯುತ್ತಮ ಚಾರಿತ್ಯವುಳ್ಳ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ಜನತೆ ಮೇಲಿದೆ. ಈ ನಿಟ್ಟಿನಲ್ಲಿ ಜನ ಸಂಗ್ರಾಮ ಪರಿಷತ್ ವತಿಯಿಂದ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಆರಂಭಿಸಿದೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಸಂಚಾಲಕ ಎಸ್.ಆರ್. ಹಿರೇಮಠ, ವಿವಿಧ ರಾಜಕೀಯ ಪಕ್ಷಗಳ ಮುಖಂಡರಾದ ಡಿ.ಕೆ. ಶಿವಕುಮಾರ, ಲಾಡ್ ಸಹೋದರರು, ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ, ಕರುಣಾಕರ ರೆಡ್ಡಿ, ವಿ. ಸೋಮಣ್ಣ, ಶಿವರಾಮ ಹೆಬ್ಬಾರ, ಸತೀಶ ಸಾಯಿಲ್, ಅಬ್ದುಲ್ ವಾಹೆಬ್, ಬಿ. ಶ್ರೀರಾಮುಲು, ಆನಂದ ಸಿಂಗ್, ಬಿ. ನಾಗೇಂದ್ರ, ಟಿ.ಎಸ್. ಸುರೇಶಬಾಬು, ಮುರುಗೇಶ ನಿರಾಣಿ, ಕೆ.ಎಸ್. ಈಶ್ವರಪ್ಪ, ಶ್ರೀಶೈಲಪ್ಪ ಬಿದರೂರ, ಸಾರಾ ಮಹೇಶ ಸೇರಿದಂತೆ ಅನೇಕರು ಭ್ರಷ್ಟಾಚಾರ ಮಾಡಿದ್ದಾರೆ. ಇವರೆಲ್ಲ ಮತ್ತೆ ಆಯ್ಕೆಯಾದರೆ ರಾಜ್ಯದ ಸ್ಥಿತಿ ಇನ್ನೂ ಹದಗೆಡುತ್ತದೆ. ಈ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದರು.
ಮೇ 5ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳು ಮತದಾರರಿಗೆ ಹಲವಾರು ರೀತಿಯ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಅಂಥವರ ಕುರಿತು ಮಾಹಿತಿ ಬಂದಲ್ಲಿ ಜನರು ಕೂಡಲೇ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಲ್ಲದೇ ಜನ ಸಂಗ್ರಾಮ ಪರಿಷತ್ ಸಹ ಸಾರ್ವಜನಿಕರೊಂದಿಗೆ ಸೇರಿ ಅವರ ವಿರುದ್ಧ ಹೋರಾಟ ನಡೆಸಲಿದೆ. ಈಗ ತಾನೇ ಹುಟ್ಟಿಕೊಂಡಿರುವ ಕೆಜೆಪಿ ಮತ್ತು ಬಿಎಸ್ಆರ್ ಕಾಂಗ್ರೆಸ್ನಲ್ಲಿ ಭ್ರಷ್ಟರೇ ಮುಖ್ಯಸ್ಥರಾಗಿದ್ದಾರೆ. ಆದರೆ, ಕೆಲವು ಪ್ರಾಮಾಣಿಕ ವ್ಯಕ್ತಿಗಳು ಆ ಪಕ್ಷಕ್ಕೆ ಸೇರಿದ್ದು, ಹೊರಬಂದು ಪಕ್ಷೇತರರಾಗಿ ಸ್ಪರ್ಧಿಸಲಿ ಎಂದು ಅವರು ಅಭಿಪ್ರಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

