ಭಾರತೀಯ ಸಂಸ್ಕೃತಿಗೆ ಒತ್ತು ನೀಡಿ
ಕನ್ನಡಪ್ರಭ ವಾರ್ತೆ, ನವಲಗುಂದ, ಏ. 13
ಭಾರತೀಯ ಸಂಸ್ಕೃತಿ, ಪರಂಪರೆ, ಧಾರ್ಮಿಕ ಆಚರಣೆಗಳನ್ನು ಹಿಂದೂಗಳು ಪಾಲಿಸಿ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಮ್ಮ ಸಂಸ್ಕೃತಿಯ ಉಳಿವಿಗಾಗಿ ಜಾಗೃತಗೊಳ್ಳಬೇಕು ಎಂದು ಶಿವಶರಣೆ ಶಾಂತಮ್ಮ ತಾಯಿ ಹೇಳಿದರು.
ಅವರು ಯುಗಾದಿ ಉತ್ಸವ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ಹಿಂದೂ ಜಾಗೃತಿ ಶೋಭಾಯಾತ್ರೆ ಹಾಗೂ ಧಾರ್ಮಿಕ ಸಭೆಯನ್ನುದ್ದೇಶಿಸಿ ಆಶೀವರ್ಚನ ನೀಡಿದರು.
ಸಾನ್ನಿಧ್ಯ ವಹಿಸಿದ್ದ ನಾಗಲಿಂಗಸ್ವಾಮಿ ಮಠದ ವೀರೆಂದ್ರ ಸ್ವಾಮೀಜಿ ಮಾತನಾಡಿ, ಹಿಂದೂ ಧರ್ಮ ಶ್ರೇಷ್ಠವಾದದ್ದು, ಇದಕ್ಕೆ 5 ಸಾವಿರ ವರ್ಷದ ಇತಿಹಾಸವಿದೆ. ಧರ್ಮದಿಂದ ಮೋಕ್ಷ ಪಡೆದುಕೊಳ್ಳಲು ಸಾಧ್ಯ. ಎಲ್ಲ ಜಾತಿಯವರು ದೇಶದ ಉನ್ನತಿಗಾಗಿ ಶ್ರಮಿಸಬೇಕಿದೆ ಎಂದರು.
ಸುಳ್ಳದ ಪಂಚಗ್ರಹ ಹಿರೇಮಠದ ಶ್ರೀ ಅಭಿನವ ಸಿದ್ದರಾಮ ಶಿವಾಚಾರ್ಯ ಸ್ವಾಮಿಗಳು, ಹಿರೇಮಠದ ಶ್ರೀ ಸಿದ್ದೇಶ್ವರ ಶಿವಾಚಾರ್ಯರು, ಗವಿಮಠದ ಶ್ರೀ ಬಸವಲಿಂಗ ಮಹಾಸ್ವಾಮಿಗಳು, ಅಡ್ನೂರಿನ ದಾಸೋಹ ಮಠದ ಶ್ರೀ ಪಂಚಾಕ್ಷರ ಶಿವಾಚಾರ್ಯ ಸ್ವಾಮಿಗಳು, ಶಿರಕೋಳದ ಶ್ರೀ ಸಿದ್ದರಾಮ ಶಿವಾಚಾರ್ಯ ಸ್ವಾಮಿಗಳು, ನರಗುಂದ ಪತ್ರಿವನ ಮಠದ ಶ್ರೀ ಗುರುಸಿದ್ದವೀರ ಶಿವಯೋಗಿ ಮಹಾಸ್ವಾಮಿಗಳು ಆಶೀವರ್ಚನ ನೀಡಿದರು.
ಇದಕ್ಕೂ ಮುನ್ನ ನಗರದ ಗವಿಮಠದಿಂದ ಪ್ರಮುಖ ಬೀದಿಗಳಲ್ಲಿ ಹಿಂದೂ ಜಾಗೃತಿ ಶೋಭಾಯಾತ್ರೆಯನ್ನು ವಾದ್ಯ ಮೇಳಗಳೊಂದಿಗೆ ವಿಜೃಂಭಣೆಯಿಂದ ನಡೆಯಲಾಯಿತು.
ಯುಗಾದಿ ಉತ್ಸವದಲ್ಲಿ ಸಾಯಿಬಾಬ ಆನೇಗುಂದಿ, ಚೌಡಯ್ಯ ಗುಡಾರದ, ಸಂತೋಷ ಪಾಟೀಲ, ಚನ್ನಪ್ಪ ನಾಗರಹಳ್ಳಿ, ಆನಂದ ಹವಳಕೋಡ, ಮುರಳಿ ಹೆಬಸೂರ, ಮಂಜುನಾಥ ಆರೇರ, ರಾಘವೇಂದ್ರ ವಡ್ಡರ, ಸುಪ್ರೀತ್ ಹೆಬಸೂರ, ನಾಗಪ್ಪ ಭೋವಿ, ರಮೇಶ ಪಲ್ಲೇದ ಹಾಗೂ ಹಿಂದೂ ಅಭಿಮಾನಿಗಳು ಪಾಲ್ಗೊಂಡಿದ್ದರು.
ಎಸ್.ಎಂ. ಮೆಣಸಿನಕಾಯಿ ಸ್ವಾಗತಿಸಿದರು. ಎಂ.ಬಿ. ಪವಾಡಶೆಟ್ಟರ ನಿರೂಪಿಸಿದರು. ಜಂಗಣ್ಣವರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

