ಭಕ್ತರಿಗೂ ಸಂಹಿತೆ ಬಿಸಿ
ಧಾರವಾಡ: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಇಲ್ಲಿನ ಕೆಲಗೇರಿ ರಸ್ತೆಯಲ್ಲಿರುವ ಸಾಯಿನಗರದಲ್ಲಿನ ಶಿರಡಿ ಸಾಯಿಬಾಬಾ ಸಂಸ್ಥೆ ವತಿಯಿಂದ ಏ. 19ರಂದು ರಾಮನವಮಿ ಅಂಗವಾಗಿ ಆಚರಿಸಲು ತೀರ್ಮಾನಿಸಿದ್ದ ಸಾಯಿರಾಮ ಉತ್ಸವವನ್ನು ಸರಳವಾಗಿ ನಡೆಸಲು ತೀರ್ಮಾನಿಸಲಾಗಿದೆ. ಪ್ರತಿವರ್ಷದಂತೆ ವಿಜೃಂಭಣೆಯಿಂದ ಸಾಯಿರಾಮ ಉತ್ಸವ ಆಚರಿಸಿಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಅನ್ನ ಸಂತರ್ಪಣೆ ನಡೆಸದಂತೆ ಚುನಾವಣಾಧಿಕಾರಿಗಳು ಸೂಚಿಸಿದ್ದಾರೆ. ಹೀಗಾಗಿ ಅಭಿಷೇಕ, ಹೋಮ-ಹವನ ಮತ್ತು ಸಾಯಿರಾಮರ ತೊಟ್ಟಿಲೋತ್ಸವ ಕಾರ್ಯಕ್ರಮಗಳು ಮಾತ್ರ ನಡೆಯುತ್ತಿದ್ದು, ಭಕ್ತರು ಸಹಕರಿಸಬೇಕು ಎಂದು ಶ್ರೀ ಶಿರಡಿ ಸಾಯಿಬಾಬಾ ಸಂಸ್ಥೆ ಪ್ರಕಟಣೆಯಲ್ಲಿ ವಿನಂತಿಸಿದೆ.
ಇಂದು ಕಾರ್ಯಕ್ರಮ
ಧಾರವಾಡ: ಇಲ್ಲಿನ ಹೊಯ್ಸಳ ನಗರದ ವಿದ್ಯಾಗಣಪತಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಏ. 17ರಂದು ಮಧ್ಯಾಹ್ನ 2ರಿಂದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ನಡೆಯಲಿದೆ. ನ್ಯಾಯವಾದಿಗಳಾದ ವೆಂಕಟೇಶ ಕುಲಕರ್ಣಿ ಹಾಗೂ ಎಂ.ಸಿ. ಚಾಕಲಬ್ಬಿ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಬಾಬೂಜಿ ಜಯಂತಿ
ಧಾರವಾಡ: ಅಮ್ಮಿನಬಾವಿ ಗ್ರಾಮದ ಮಾದರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಬಾಬು ಜಗಜೀವನರಾಮ ಜಯಂತಿಯನ್ನು ಆಚರಿಸಲಾಯಿತು. ಶಾಲೆಯ ಮುಖ್ಯಾಧ್ಯಾಪಕಿ ರೇಣುಕಾ ಬೆಳವಡಿ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಅಧ್ಯಾಪಕಿ ಶಾಂತಾ ಬೆಟಗೇರಿ ಬಾಬೂಜಿ ಅವರ ಜೀವನ-ಸಾಧನೆ ಕುರಿತು ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

