ಕಾಂಗ್ರೆಸ್, ಬಿಜೆಪಿ ನಾಯಕರ ಸ್ವಾಗತಕ್ಕೆ ಸಿದ್ಧತೆ
ಹುಬ್ಬಳ್ಳಿ: ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ನ ದಿಗ್ಗಜರನ್ನು ಚುನಾವಣಾ ಪ್ರಚಾರಕ್ಕೆ ಎಳೆಯುವ ಮೂಲಕ ಜಿಲ್ಲೆಯಲ್ಲಿ ಕಾಂಗ್ರೆಸ್ ಅಲೆ ಹುಟ್ಟು ಹಾಕಲು ಸಿದ್ಧವಾಗಿರುವ ಸ್ಥಳೀಯ ಮುಖಂಡರು ಈ ನಿಟ್ಟಿನಲ್ಲಿ ಈಗಾಗಲೇ ಸಿದ್ಧತೆ ನಡೆಸಿದ್ದಾರೆ.
ಏ. 29ರಂದು ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿರುವ ಪ್ರಧಾನಿ ಮನಮೋಹನ್ ಸಿಂಗ್ ಚುನಾವಣಾ ಪ್ರಚಾರ ಕಾರ್ಯಕ್ಕೆ ಇಲ್ಲಿನ ನೆಹರು ಸ್ಟೇಡಿಯಂ ಅನ್ನು ಕಾಂಗ್ರೆಸ್ ನಾಯಕರು ಸಿದ್ಧಗೊಳಿಸಿದ್ದಾರೆ.
ಶನಿವಾರ, ನಗರಕ್ಕೆ ಆಗಮಿಸಿದ ಎಐಸಿಸಿ ಕಾರ್ಯದರ್ಶಿ, ಸಂಸದ ಅಶೋಕ ತನ್ವರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎ.ಎಂ. ಹಿಂಡಸಗೇರಿ ಮತ್ತು ಮಹೇಂದ್ರ ಸಿಂಘಿ ಅವರೊಂದಿಗೆ ನೆಹರು ಮೈದಾನ ಪರಿಶೀಲಿಸಿದರು. ಚುನಾವಣಾ ಪ್ರಚಾರ ಕಾರ್ಯಕ್ರಮದ ಕುರಿತು ಪ್ರಧಾನಿ ಜತೆ ಚರ್ಚಿಸಿದ ನಂತರ ಸ್ಥಳ ನಿಗದಿ ಮಾಡಲಾಗುವುದು ಎಂದು ಜಿಲ್ಲೆಯ ಕೈ ಪಡೆಗೆ ಮಾಹಿತಿ ರವಾನಿಸಿದ್ದಾರೆ.
ಬಿಜೆಪಿ ಪ್ರಚಾರ: ಚುನಾವಣಾ ಪ್ರಚಾರದ ಭರಾಟೆಯಲ್ಲಿ ಬಿಜೆಪಿಯೂ ಮುಳುಗಿದ್ದು, ಸ್ಥಳೀಯ ಮುಖಂಡರ ಪಾದಯಾತ್ರೆ ಜೊತೆಗೆ ಬಿಜೆಪಿ ತನ್ನ ಹಿರಿಯ ನಾಯಕರಾದ ಲಾಲ್ಕೃಷ್ಣ ಆಡ್ವಾಣಿ, ವೆಂಕಯ್ಯನಾಯ್ಡು ಮತ್ತು ರಾಜನಾಥ ಸಿಂಗ್ ಧಾರವಾಡ, ಹಾವೇರಿ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಪ್ರಚಾರ ಮಾಡಲಿದ್ದಾರೆ.
ಏ. 21ರಂದು ಲಾಲ್ಕೃಷ್ಣ ಆಡ್ವಾಣಿ, ವೆಂಕಯ್ಯ ನಾಯ್ಡು ಹುಬ್ಬಳ್ಳಿಗೆ ಆಗಮಿಸಲಿದ್ದು, ಹುಬ್ಬಳ್ಳಿಯಲ್ಲಿ ಆಡ್ವಾಣಿ ಪ್ರಚಾರ ಕಾರ್ಯಕ್ರಮ ನಿಗದಿಯಾಗಿಲ್ಲ. ಬಿಜೆಪಿ ಮಾಜಿ ರಾಷ್ಟ್ರೀಯ ಅಧ್ಯಕ್ಷ ವೆಂಕಯ್ಯ ನಾಯ್ಡು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಮತ್ತು ಪೂರ್ವ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳಾದ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮತ್ತು ವೀರಭದ್ರಪ್ಪ ಹಾಲಹರವಿ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಲಿದ್ದಾರೆ.
ಜೆಡಿಎಸ್ ಮಾತ್ರ ಇನ್ನೂ ಅಬ್ಬರದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿಲ್ಲ. ಜೆಡಿಎಸ್ನ ಹಿರಿಯಾಳು ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರು ಧಾರವಾಡ ಜಿಲ್ಲೆಯಲ್ಲಿ ಪ್ರಚಾರ ಕೈಗೊಳ್ಳುತ್ತಾರೋ ಇಲ್ಲವೋ ಇನ್ನೂ ಅನುಮಾನ. ಅವಳಿ ನಗರದ ಕಾರ್ಯಕರ್ತರು ಮಾಜಿ ಪ್ರಧಾನಿ, ಮಾಜಿ ಸಿಎಂ ಬರುವಿಕೆಗೆ ಕಾಯುತ್ತಿದ್ದಾರೆ. ಅವರ ಕಾಯುವಿಕೆ ಎಷ್ಟು ಫಲ ನೀಡುತ್ತದೋ ಗೊತ್ತಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

