ಧಾರವಾಡ

ಹಗರಣಗಳಲ್ಲೆ ಕಾಲಹರಣ ಮಾಡಿದ ಬಿಜೆಪಿ

Published On :

ಕುಂದಗೋಳ:  ಅಧಿಕಾರ ದಾಹ, ಬ್ಲೂಫಿಲಂ, ಹಾಲಪ್ಪನ ಪ್ರಕರಣ, ಭ್ರಷ್ಟಾಚಾರ, ಸಾಲು ಸಾಲು ಹಗರಣದಲ್ಲಿಯೇ ಬಿಜೆಪಿ ಕಾಲಹರಣ ಮಾಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದರು.
ಕುಂದಗೋಳ ಪಟ್ಟಣದ ಗಾಂಧಿ ಸರ್ಕಲ್ ಬಳಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಬಿಜೆಪಿ ಸರ್ಕಾರ ಸಾವಿರಾರು ಕೋಟಿ ಲೂಟಿ ಮಾಡಿದೆ. ಅಕ್ರಮ ಗಣಿಗಾರಿಕೆಯಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಪಾಲು ಪಡೆದಿದ್ದರೆಂದು ಆರೋಪಿಸಿದರು. ಉಪಮುಖ್ಯಮಂತ್ರಿಯಾಗಿದ್ದಾಗ ತಮ್ಮ ಬಳಿಯೇ ಇದ್ದ ಹಣಕಾಸು ಖಾತೆಯಿಂದ  ಯಾವೊಂದೂ ಹಗರಣಗಳು ನಡೆದಿಲ್ಲ. ಗುತ್ತಿಗೆದಾರರಿಂದ ನೈಯಾ ಪೈಸೆ ಕೂಡ ಪಡೆದಿಲ್ಲ ಎಂದರು.
ಸಚಿವರಾಗಿದ್ದ ಸಿ.ಎಂ. ಉದಾಸಿ ಹಾಗೂ ಬಸವರಾಜ ಬೊಮ್ಮಾಯಿ ಕಾಮಗಾರಿ ಗುತ್ತಿಗೆ ನೀಡಲು ಕಮೀಷನ್ ಪಡೆದಿದ್ದಾರೆ. ತಮ್ಮ ಭ್ರಷ್ಟಾಚಾರ ಮುಚ್ಚಿ ಹಾಕಲು ಇನ್ನಿಲ್ಲದ ಕಸರತ್ತು ನಡೆಸಿ ಜನತೆಗೆ ಮಣ್ಣೆರಚಿದ್ದಾರೆಂದು ಸಿದ್ದರಾಮಯ್ಯ ಟೀಕಿಸಿದರು. ಕಾಂಗ್ರೆಸ್ ಅಭ್ಯರ್ಥಿ ಸಿ.ಎಸ್. ಶಿವಳ್ಳಿ ಮಾತನಾಡಿ, ಅಧಿಕಾರ ಇದ್ದಾಗ ಮತ್ತು ಇಲ್ಲದೇ ಇದ್ದಾಗ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಶಾಸಕನಾಗಿದ್ದಾಗ ಮಾಡಿದ ಸಾಧನೆಯನ್ನು ಜನತೆ ಮರೆತಿಲ್ಲ. ಕ್ಷೇತ್ರದ ಜನತೆ ಎಂದಿಗೂ ಹಣಕ್ಕೆ ತಮ್ಮ ಮತ ಮಾರಿಕೊಳ್ಳುವುದಿಲ್ಲ. ಶುದ್ಧ, ಸಚ್ಚಾರಿತ್ರ್ಯ ವ್ಯಕ್ತಿಯನ್ನು ಜನತೆ ಬೆಂಬಲಿಸಲಿದ್ದಾರೆಂಬ ವಿಶ್ವಾಸ ವ್ಯಕ್ತಪಡಿಸಿದರು. ಮಾಜಿ ಸಂಸದರಾದ ಪ್ರೊ. ಐ.ಜಿ. ಸನದಿ, ಮಂಜನಾಥ ಕುನ್ನೂರು, ವಿಧಾನಪರಿಷತ್ ಸದಸ್ಯ  ಶ್ರೀನಿವಾಸ ಮಾನೆ, ಎ.ಎಂ. ಹಿಂಡಸಗೇರಿ, ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ, ಟಿ.ಈಶ್ವರ ಮಾತನಾಡಿದರು. ಜಿಪಂ ಮಾಜಿ ಅಧ್ಯಕ್ಷೆ ಶಾಂತಮ್ಮ ಗುಜ್ಜಳ, ಜಿಪಂ ಸದಸ್ಯ ವೆಂಕನಗೌಡ ಹಿರೇಗೌಡ್ರ, ಅರವಿಂದ ಕಟಗಿ, ದಯಾನಂದ ಕುಂದೂರ, ಸಕ್ರು ಲಮಾಣಿ, ಬಸವರಾಜ ಸಿರಸಂಗಿ, ಅಪ್ಪಣ್ಣ ಹಿರೇಗೌಡ್ರ, ಸಿದ್ದಪ್ಪ ಹುಣಸಣ್ಣವರ, ಮಲ್ಲಿಕಾರ್ಜುನ ಸಜ್ಜನ, ಹೈದರ್‌ಸಾಬ ಹಸುಬಾಯಿ, ಚಿದಾನಂದ ಬಡಿಗೇರ   ವೇದಿಕೆ ಮೇಲಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.