ಹಿಂದುಳಿದವರ ಅಭಿವೃದ್ಧಿಗೆ ಆದ್ಯತೆ: ತಬ್ರೇಜ್ ಶಂಸಿ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ತಬ್ರೇಜ್ ಶಂಸಿ ಅವರು ಶನಿವಾರ ತಮ್ಮ ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.
ಶನಿವಾರ ಬೆಳಗ್ಗೆ ಶಿರಡಿ ನಗರ, ವಿದ್ಯಾನಗರದ ದೇವಿನಗರ ರಾಜನಗರ, ವಿದ್ಯಾನಗರ, ದೇವಿನಗರ, ಕುಮಾರವ್ಯಾಸ ನಗರ ಮುಂತಾದ ಪ್ರದೇಶಗಳಲ್ಲಿ ಪಾದಯಾತ್ರೆ ಕೈಗೊಂಡು ಮತ ಯಾಚಿಸಿದರು. ಈ ಸಂದರ್ಭದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ತಾವು ಆಯ್ಕೆಯಾದರೆ ದಲಿತರ ಕೇರಿಗಳ ಅಭಿವೃದ್ಧಿ, ದಲಿತ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುತ್ತೇನೆ.
ಹು-ಧಾ ಅವಳಿ ನಗರದಲ್ಲಿ ಮೂಲಸೌಕರ್ಯಗಳ ಕೊರತೆ ಸಾಕಷ್ಟು ಇದ್ದು, ಶಾಸಕನಾಗಿ ಆಯ್ಕೆಯಾದರೆ ಅವಳಿ ನಗರದ ಮೂಲಸೌಕರ್ಯಗಳ ಸಮಸ್ಯೆ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಭರವಸೆ ನೀಡಿದರು. ಜೆಡಿಎಸ್ ಅಭ್ಯರ್ಥಿ ತಬ್ರೇಜ್ ಶಂಸಿ ಅವರೊಂದಿಗೆ ಇರ್ಫಾಣ್ ಸಮ್ನಿ, ಎಚ್.ಐ ಚಾವೂಸ್, ನಾಝೀರಾ ಶಂಸಿ, ತಸ್ಲೀಮ್ ಶಂಸಿ, ವಿನೀತಾ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

