ಧಾರವಾಡ

ಶಿಲ್ಪಾ ಶೆಟ್ಟರ್ ಮತಯಾಚನೆ

Published On :

ಹುಬ್ಬಳ್ಳಿ:  ಹು-ಧಾ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿರುವ ಜಗದೀಶ ಶೆಟ್ಟರ್ ದಾಖಲೆ ಅಂತರದಿಂದ ಗೆಲವು ಸಾಧಿಸಲಿದ್ದಾರೆಂದು ಶಿಲ್ಪಾ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು. ಹು-ಧಾ ಸೆಂಟ್ರಲ್ ಕ್ಷೇತ್ರದ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ಜಗದೀಶ ಶೆಟ್ಟರ್ ಪರ ಚುನಾವಣಾ ಪಾದಯಾತ್ರೆ ಕೈಗೊಂಡಿರುವ ಅವರು, ಮತದಾರರಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಶೆಟ್ಟರ್ ಅವರಿಗೆ ಮತ ನೀಡಿ ಎಂದು ವಿನಂತಿಸಿಕೊಂಡರು.  ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಅವರ ಪತ್ನಿ ಜ್ಯೋತಿ ಜೋಶಿ ಅವರು ಕಾರವಾರ ರಸ್ತೆಯ ದೀನ ಬಂಧು ಕಾಲೋನಿ, ಬಂಗ್ಲೆ ಓಣಿ, ಪೊಲೀಸ್ ಕ್ವಾಟರ್ಸ್ ಹಾಗೂ ಹೊಸೂರ ರಸ್ತೆಗಳಲ್ಲಿ ಚುನಾವಣಾ ಪಾದಯಾತ್ರೆ ಕೈಗೊಂಡು ಜಗದೀಶ ಶೆಟ್ಟರ್ ಅವರಿಗೆ ಮತ ನೀಡಿ ಎಂದು ಮತದಾರರಲ್ಲಿ ವಿನಂತಿಸಿದರು.  ಹುಡಾ ಮಾಜಿ ಅಧ್ಯಕ್ಷ ಬಾಳು ಮಗಜಿಕೊಂಡಿ, ಮಾಜಿ ಮಹಾಪೌರ ವಿಜಯಾನಂದ ಹೊಸಕೋಟಿ, ರವಿ ನಾಯಕ, ವೀರಣ್ಣ ಕಾಶಪ್ಪನವರ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.