ಪ್ರಾದೇಶಿಕ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿ: ತಬ್ರೇಜ್
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಏ.22
ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಜನರ ಅಧಿಕಾರ ಜನರ ಕೈಯಲ್ಲಿರಬೇಕು ಎಂದು ಹು-ಧಾ ಸೆಂಟ್ರಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ತಬ್ರೇಜ್ ಶಂಸಿ ಅನಿಸಿಕೆ ವ್ಯಕ್ತಪಡಿಸಿದರು.
ಇಲ್ಲಿನ ಜೆ.ಸಿ. ನಗರ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ಚುನಾವಣಾ ಪಾದಯಾತ್ರೆ ಕೈಗೊಂಡ ಅವರು, ಹುಬ್ಬಳ್ಳಿ ನಗರದ ಮೂಲಸೌಕರ್ಯಗಳ ಕೊರತೆಯ ಸಮಸ್ಯೆ ಪರಿಹಾರಕ್ಕೆ ಜೆಡಿಎಸ್ಗೆ ಮತ ನೀಡಿ ಎಂದು ಅವರು ಕೇಳಿಕೊಂಡರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಗ್ರಾಮೀಣ ಯುವ ಜೆಡಿಎಸ್ ಅಧ್ಯಕ್ಷ ಕಿರಣ ಹಿರೇಮಠ ಮಾತನಾಡಿ, ಎಚ್.ಡಿ. ಕುಮಾರಸ್ವಾಮಿ 20 ತಿಂಗಳ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಜಾರಿಗೊಳಿಸಿದ ವಿವಿಧ ಜನಪ್ರಿಯ ಯೋಜನೆಗಳ ಬಗ್ಗೆ ಹೇಳಿದರು.
ಮಹಿಳೆಯರಿಂದ: ತಬ್ರೇಜ್ ಶಂಸಿ ಅವರ ಪರವಾಗಿ ಅವರ ಪತ್ನಿ ನಾಝಿರಾ ಶಂಸಿ ಮತ್ತು ತಸ್ಮಿನಾ ಶಂಸಿ ನೇತೃತ್ವದಲ್ಲಿ ಆಝಾದ್ ಕಾಲೋನಿ, ಶಿವಗಂಗಾ ಲೇಔಟ್ ಮೊದಲಾದ ಪ್ರದೇಶಗಳಲ್ಲಿ ಜೆಡಿಎಸ್ ಮಹಿಳಾ ಕಾರ್ಯಕರ್ತರು ವ್ಯಾಪಕ ಪ್ರಚಾರ ಮಾಡಿದರು.
ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಚಿತ್ರನಟಿ ಐಶ್ವರ್ಯ, ಜೆಡಿಎಸ್ ಜನರ ಪಕ್ಷವಾಗಿದ್ದು, ಉತ್ತಮ ಆಡಳಿತ ನೀಡಿ ಜನರ ಆಶೋತ್ತರಗಳನ್ನು ಈಡೇರಿಸುತ್ತದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

