ಧಾರವಾಡ

ಯಡಿಯೂರಪ್ಪಗೆ ಜಗದೀಶ ಶೆಟ್ಟರ್ ಸವಾಲು

Published On :

ಹುಬ್ಬಳ್ಳಿ: 9 ತಿಂಗಳ ಅವಧಿಯಲ್ಲಿ ಜಗದೀಶ ಶೆಟ್ಟರ್ ಅವರು ಪತ್ನಿ, ಮಕ್ಕಳೊಂದಿಗೆ ಇಡೀ ವಿಧಾನಸೌಧ ಕೊಳ್ಳೆ ಹೊಡೆದಿದ್ದಾರೆ ಎಂದು ಆರೋಪಿಸಿರುವ ಯಡಿಯೂರಪ್ಪ ತಾಕತ್ತಿದ್ದರೆ ದಾಖಲೆ ಸಮೇತ ಈ ಆರೋಪ ಸಾಬೀತುಪಡಿಸಲಿ ಎಂದು ಸಿಎಂ ಶೆಟ್ಟರ್ ಸವಾಲೆಸೆದಿದ್ದಾರೆ.
ಮಂಗಳವಾರ, ಇಲ್ಲಿನ ಡಾಲರ್ಸ್ ಕಾಲನಿಯಲ್ಲಿ ಚುನಾವಣಾ ಪ್ರಚಾರ ಕೈಗೊಂಡ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಯಸ್ಸಿನಲ್ಲಿ ಹಿರಿಯರಾಗಿರುವ ಯಡಿಯೂರಪ್ಪ ತಮ್ಮ ಘನತೆಗೆ ತಕ್ಕಂತೆ ನಡೆದುಕೊಳ್ಳಬೇಕೆ ವಿನಃ ಮತ್ತೊಬ್ಬರ ಮನಸ್ಸಿಗೆ ನೋವಾಗದಂತೆ ಹೇಳಿಕೆ ನೀಡಬಾರದು. ಒಂದು ವೇಳೆ ನಾನು ಪತ್ನಿ ಮಕ್ಕಳೊಂದಿಗೆ ಸೇರಿ ವಿಧಾನಸಭೆ ಕೊಳ್ಳೆ ಹೊಡೆದಿದ್ದರೆ ಅದನ್ನು ದಾಖಲೆ ಸಮೇತ ಸಾಬೀತುಪಡಿಸಲಿ ಅದನ್ನು ಬಿಟ್ಟು ಇಂತಹ ಚಿಲ್ಲರೆ ಹೇಳಿಕೆ ನೀಡುವುದು ತರವಲ್ಲ ಎಂದಿದ್ದಾರೆ.
ಹಿರಿಯ ಮುಖಂಡ ಎಲ್.ಕೆ. ಆಡ್ವಾಣಿ ಅವರು ಯಡಿಯೂರಪ್ಪ ಅವರಿಂದ ಭಾರಿ ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿರುವ ಧನಂಜಯಕುಮಾರ್ ಮೊದಲು ತಮ್ಮ ಯೋಗ್ಯತೆ ಏನು ಎಂದು ತಿಳಿದುಕೊಳ್ಳಲಿ ನಂತರ ಮಾತನಾಡುವುದನ್ನು ಕಲಿಯಲಿ ಎಂದು ಪ್ರತಿಕ್ರಿಯಿಸಿದರು. ರಾಷ್ಟ್ರಮಟ್ಟದ ನಾಯಕರಾಗಿರುವ ಆಡ್ವಾಣಿ ಅವರ ಮೇಲೆ ಒಂದು ಕಪ್ಪು ಚುಕ್ಕೆ ಇಲ್ಲ. ವಿರೋಧ ಪಕ್ಷದ ನಾಯಕರು ಕೂಡ ಅವರನ್ನು ಗೌರವಿಸುತ್ತಾರೆ. ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆ ನೀಡುವ ಧನಂಜಯಕುಮಾರ್ ವ್ಯಕ್ತಿತ್ವ ಏನು ಅನ್ನುವುದು ಅವರ ಆಡುವ ಮಾತುಗಳಿಂದಲೇ ತಿಳಿಯುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.