ಧಾರವಾಡ

ರಂಗೇರಿದ ಶೆಟ್ಟರ್ ಚುನಾವಣಾ ಪ್ರಚಾರ

Published On :

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಏ. 23
ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರ ಪರ ಚುನಾವಣಾ ಪ್ರಚಾರ ತಾರಕಕ್ಕೆ ಏರಿದೆ.
ಮಂಗಳವಾರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ಸೇರಿದಂತೆ ಸ್ವತಃ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಮಿಂಚಿನ ಚುನಾವಣಾ ಪ್ರಚಾರ ಕೈಗೊಂಡರು.
ಗೋಪನಕೊಪ್ಪ, ವಿದ್ಯಾನಗರ, ಗೋಕುಲ್ ರಸ್ತೆ, ಪ್ರಿಯದರ್ಶಿನಿ ನಗರಗಳಲ್ಲಿ ಮುಖ್ಯಮಂತ್ರಿ ಶೆಟ್ಟರ್ ಅವರೊಂದಿಗೆ ಪಾದಯಾತ್ರೆ ಕೈಗೊಂಡ ಅನಂತಕುಮಾರ್ ಅವರು, ಹು-ಧಾ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಬರೀ ಶಾಸಕ ಅಷ್ಟೇ ಅಲ್ಲ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿದ್ದು, ಕ್ಷೇತ್ರದ ಮತದಾರರು ಶೆಟ್ಟರ್ ಅವರನ್ನು 50 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಹೇಳಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿ ಶೆಟ್ಟರ್ ಅವರು ಡಾಲರ್ಸ್ ಕಾಲನಿ, ಜೆ.ಸಿ. ನಗರ ಮುಂತಾದ ಸ್ಥಳಗಳಲ್ಲಿ ಪಾದಯಾತ್ರೆ ಕೈಗೊಂಡು ಮತ ಯಾಚಿಸಿದರು. ಸಂಜೆ ಮತ್ತೇ ವಿದ್ಯಾನಗರದ ಜೆ.ಸಿ. ನಗರದ ಮೆಹರವಾಡೆ ಅವರ ಮನೆಯಲ್ಲಿ ಶೆಟ್ಟರ್ ಅವರ ಚುನಾವಣಾ ಪ್ರಚಾರ ಸಭೆ ಜರುಗಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.