ಧಾರವಾಡ

ಜೆಡಿಎಸ್ ಅಭ್ಯರ್ಥಿ ಶಮ್ಸ್ ತಬ್ರೇಜ್ ಸಂಶಿ ಪ್ರಚಾರ

Published On :

ಹುಬ್ಬಳ್ಳಿ:  ಹು-ಧಾ ಸೆಂಟ್ರಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಮ್ಸ್ ತಬ್ರೇಜ್ ಸಂಶಿ ಅವರು ಸೋಮವಾರ ಕೇಶ್ವಾಪುರದ ಶಬರಿ ನಗರ, ಶಾಂತಿ ನಗರದಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಪಾದಯಾತ್ರೆ ಕೈಗೊಂಡು ಚುನಾವಣಾ ಪ್ರಚಾರ ಮಾಡಿದರು.
ಮನೆ-ಮನೆಗಳಿಗೆ ಮತದಾರರನ್ನು ಖುದ್ದಾಗಿ ಭೇಟಿ ಮಾಡಿದ ತಬ್ರೇಜ್ ಅವರು, ಕುಮಾರಸ್ವಾಮಿ ಅವರ 20 ತಿಂಗಳ ಅವಧಿಯಲ್ಲಿ ಎಲ್ಲ ವರ್ಗದ ಜನರಿಗೂ ಅನುಕೂಲವಾಗುವಂತಹ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿತ್ತು. ಕಳೆದ 19 ವರ್ಷಗಳಿಂದ ಹು-ಧಾ ಸೆಂಟ್ರಲ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಯಾದ ನಂತರವೂ ಈ ಕ್ಷೇತ್ರದ ಅಭಿವೃದ್ಧಿಗೆ ಗಮನ ನೀಡಿಲ್ಲ. ಬಿಜೆಪಿ ಸರ್ಕಾರ ಆಂತರಿಕ ಕಚ್ಚಾಟ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿದ ಪರಿಣಾಮ ಇಡೀ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಹುಬ್ಬಳ್ಳಿ, ಧಾರವಾಡ ಅವಳಿ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಗ್ರಾಮೀಣ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಿರಣ್ ಹಿರೇಮಠ, ಶಂಕರ ಧಾರವಾಡ, ನಾಗರಾಜ ಪಾಟೀಲ, ಸುನೀಲ ವಡ್ಡರ, ಪಿ. ಶೇಖ್, ಸಮ್ಮದ್ ಶೇಖ್ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.