ಧಾರವಾಡ

ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಅಧಿಕಾರಿಗಳಿಗೆ ಘೇರಾವ್

Published On :

ಕನ್ನಡಪ್ರಭ ವಾರ್ತೆ, ಧಾರವಾಡ, ಆ. 2
ತಾಲೂಕಿನ ಮನಗುಂಡಿ ಗ್ರಾಪಂ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ ಗುರುವಾರ ಗ್ರಾಮಸ್ಥರು ಗ್ರಾಪಂನಲ್ಲಿ ಅಧಿಕಾರಿಗಳಿಗೆ ಘೇರಾವ್ ಹಾಕಿ ಪ್ರತಿಭಟಿಸಿದರು.
ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ಸಿಬ್ಬಂದಿ ಮನ ಬಂದಂತೆ ವರ್ತಿಸುತ್ತಿದ್ದಾರೆ. ಗ್ರಾಮಸ್ಥರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಅಧಿಕಾರಿಗಳು ತಿಳಿದಾಗ ಗ್ರಾಪಂಗೆ ಬರುತ್ತಾರೆ. ಉಳಿದ ಸಂದರ್ಭ ನಾಪತ್ತೆಯಾಗುತ್ತಾರೆ. ಇದರಿಂದ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಅಲ್ಲದೇ, ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಗ್ರಾಮದ ಕೆಲವರಿಗೆ ಗಿಡಗಳನ್ನು ಹಂಚಿದ್ದಾರೆ. ಆದರೆ, ಈ ಕುರಿತಂತೆ ಸರಿಯಾದ ದಾಖಲೆ ಇಟ್ಟಿಲ್ಲ. ವಿವಿಧ ಯೋಜನೆಗಳ ಬಗ್ಗೆ ಸರಿಯಾಗಿ ಗ್ರಾಮಸ್ಥರಿಗೆ ಮಾಹಿತಿ ನೀಡುವುದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.
ಈ ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ತಾಪಂ ಸಹಾಯಕ ಕಾರ್ಯನಿರ್ವಾಹಕ ಅಧಿಕಾರ ಪ್ರಭಾಕರ ಬಂಡಿ, ಈ ಬಗ್ಗೆ ಸಂಪೂರ್ಣವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಹಾಗೆಯೇ ಅಧಿಕಾರಿಗಳ ಸಭೆ ನಡೆಸಿ ಸರಿಯಾಗಿ ಕಾರ್ಯನಿರ್ವಹಿಸದ ಪಿಡಿಒ ಹಾಗೂ ಕಾರ್ಯದರ್ಶಿಗಳನ್ನು ತರಾಟೆಗೆ ತೆಗೆದುಕೊಂಡರು.
ಈ ಸಂದರ್ಭ ಗ್ರಾಪಂ ಅಧ್ಯಕ್ಷ ಕರಿಯಪ್ಪ ಎತ್ತಿನಗುಡ್ಡ, ಬಸವ್ವ ಅಮ್ಮಿನಭಾವಿ, ಬಸವರಾಜ ಅಮರಗೋಳ, ರುಕ್ಮಿಣಿ ಪತ್ರೆನ್ನವರ, ಭೀಮಸಿ ಮರಲಿಂಗನವರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.