ಧಾರವಾಡ

ಜೀವನದ ಮಹತ್ವದ ಘಟ್ಟ ವಿದ್ಯಾರ್ಥಿ ಜೀವನ

Published On :

ಧಾರವಾಡ: ಹಿರೇಮಲ್ಲೂರ ಈಶ್ವರನ್ ಪದವಿಪೂರ್ವ ವಿಜ್ಞಾನ ಕಾಲೇಜು ಇಲ್ಲಿನ ಸೃಜನಾ ರಂಗಮಂದಿರದಲ್ಲಿ ಏರ್ಪಡಿಸಿದ್ದ ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮವನ್ನು ಕರ್ನಾಟಕ ಜಾನಪದ ವಿವಿ ಕುಲಪತಿ ಡಾ. ಅಂಬಳಿಕೆ ಹಿರಿಯಣ್ಣ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿ ಜೀವನ ಮಹತ್ವದ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಕಾಲೇಜಿನಲ್ಲಿ ನಡೆಯುವ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು. ಇವು ವಿದ್ಯಾರ್ಥಿಗಳ ಸಾಂಘಿಕ ಜೀವನ ಕಲಿಸುವ ಜೊತೆಗೆ ಸರ್ವತೋಮುಖವಾಗಿ ವ್ಯಕ್ತಿತ್ವ ರೂಪಿಸುತ್ತವೆ ಎಂದರು. ಹಿರಿಯ ಸಾಹಿತಿ ಡಾ.ಎಸ್.ಎಂ. ವೃಷಭೇಂದ್ರ ಸ್ವಾಮಿ ಮಾತನಾಡಿದರು. ಕಾಲೇಜು ಪಾಚಾರ್ಯ ಶಶಿಧರ ತೋಡಕರ, ಶಾಂತರಾಜ ವಿಭೂತಿ, ಆಶಾ ಹದ್ಲಿ, ಸಾಗರ ಅಬಚಿ, ಬಸವರಾಜ ಹುಣಸಿಮರದ, ಅನಿಲಕುಮಾರ, ಈರಣ್ಣ ಇಂಜನಗೇರಿ, ರಮೇಶ ತೋಟದ, ಕೇಯೂರ ಕರಗದರಿ, ಶಿವದತ್ತ ಕುಂಬಾರ, ವಿದ್ಯಾ ಬಣಕಾರ, ಶ್ರೀಧರ ಹೊಸಮಠ, ರೂಬಿಲತಾ ಮತ್ತಿತರರು ಕಾರ್ಯಕ್ರಮದಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.