ಧಾರವಾಡ

ನರಗುಂದ ಮೃತ ಯೋಧನ ತಂದೆ-ತಾಯಿಗೆ ಸನ್ಮಾನ

Published On :

ಕನ್ನಡಪ್ರಭ ವಾರ್ತೆ, ಧಾರವಾಡ, ಆ. 3
ಸೈನಿಕರು ತಮ್ಮ ಕುಟುಂಬದ ಸದಸ್ಯರಿಂದ ದೂರ ಉಳಿದು ಭಾರತದ ರಕ್ಷಣೆಗಾಗಿ ಅಹೋರಾತ್ರಿ ಶ್ರಮಿಸುತ್ತಿರುತ್ತಾರೆ. ಅವರ ಕುಟುಂಬದ ಯೋಗಕ್ಷೇವು ನೋಡಿಕೊಳ್ಳುವ ಜವಾಬ್ದಾರಿ  ಸರ್ಕಾರ  ಮತ್ತು ಸಮಾಜದ್ದಾಗಿದೆ  ಎಂದು  ಜಿಲ್ಲಾಧಿಕಾರಿ ಸಮೀರ್ ಶುಕ್ಲಾ ಹೇಳಿದರು.
ಉತ್ತರ ಕರ್ನಾಟಕ ಸೈನಿಕರ ಕಲ್ಯಾಣ ಸಮಿತಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದ ಕಾರ್ಗಿಲ್ ಸ್ತೂಪದ ಬಳಿ ಇತ್ತೀಚೆಗೆ ಏರ್ಪಡಿಸಿದ್ದ ಕಾರ್ಗಿಲ್ ವಿಜಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಸೈನಿಕರು ಇತ್ತೀಚೆಗೆ ನಡೆದ ಉತ್ತರಾಖಂಡದ ಜಲಪ್ರಳಯದಲ್ಲಿ ಸಿಕ್ಕಿಹಾಕಿಕೊಂಡ ಜನರ ಪ್ರಾಣ ಉಳಿಸಲು ಹೋಗಿ ಅನೇಕ ಯೋಧರು ಪ್ರಾಣ ಕಳೆದುಕೊಂಡರು. ಅದರಲ್ಲಿ ನರಗುಂದದ ಜಗಾಪುರದ ಯೋಧ ಬಸವರಾಜ ಯರಗಟ್ಟಿ ಕೂಡ ಒಬ್ಬರು. ಅವರ ಸಾಹಸ ನಿಜಕ್ಕೂ ಸ್ಮರಣೀಯವಾಗಿದ್ದು, ಯುವಕರಿಗೆ ಮಾದರಿಯಾಗಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಉತ್ತರ ಕರ್ನಾಟಕ ಸೈನಿಕ ಕಲ್ಯಾಣ ಸಮಿತಿ ವತಿಯಿಂದ ಮೃತ ಯೋಧ ಬಸವರಾಜ ಯರಗಟ್ಟಿ ಅವರ ಕುಟುಂಬದ ಸದಸ್ಯರಿಗೆ ಜಿಲ್ಲಾಧಿಕಾರಿಗಳು ಸನ್ಮಾನಿಸಿದರು.
ಸಮಿತಿ ಅಧ್ಯಕ್ಷ ಚಂದ್ರಶೇಖರ ಅಮೀನಗಡ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಕೃಷ್ಣ ಜೋಶಿ, ಶಿವಯೋಗಿ ಅಮೀನಗಡ, ಕೆ.ಬಿ. ಕುಲಕರ್ಣಿ, ಎಂ.ಬಿ. ಬೇನಪ್ಪನವರ, ಡಾ. ಉಮೇಶ ನಲವಡಿ, ಎಸ್.ವಿ. ಶಿರಗುಪ್ಪಿ, ಪಂಡಿತ ಮುಂಜಿ, ಈಶ್ವರ ಕಡೋಲಿ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.