ಇಂದು ಡಾ ನಂದಾ ಪಾಟೀಲರ 50 ಸಂಭ್ರಮ
ಕನ್ನಡಪ್ರಭ ವಾರ್ತೆ, ಧಾರವಾಡ, ಆ. 5
ಕರ್ನಾಟಕ ವಿವಿಯ ಸಂಗೀತ ಮಹಾವಿದ್ಯಾಲಯದಲ್ಲಿ ಕಳೆದ 20 ವರ್ಷಗಳಿಂದ ಸಂಗೀತ ಸೇವೆ ಸಲ್ಲಿಸುತ್ತಿರುವ ಗಾಯಕಿ ಡಾ. ನಂದಾ ಪಾಟೀಲರಿಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಜು. 6ರಂದು ಸಂಗೀತ ಸಂಭ್ರಮ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಸಂಜೆ 5.30ಕ್ಕೆ ವಿದ್ಯಾವರ್ಧಕ ಸಂಘದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಹರಿಹರ ಪಂಚಮಸಾಲಿ ಪೀಠದ ಸಿದ್ಧಲಿಂಗೇಶ್ವರ ಸ್ವಾಮಿಗಳು ಸಾನಿಧ್ಯ ವಹಿಸುತ್ತಾರೆ.
ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅಧ್ಯಕ್ಷತೆ ವಹಿಸಲಿದ್ದು, ಡಾ. ನಂದಾ ಪಾಟೀಲ ಕುರಿತಾದ ಸಾಕ್ಷ್ಯಚಿತ್ರವನ್ನು ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಹಾಗೂ ಸ್ವರಯಾತ್ರೆ ಆತ್ಮಕತೆ ಗ್ರಂಥವನ್ನು ಸಂಸದ ಪ್ರಹ್ಲಾದ ಜೋಶಿ ಬಿಡುಗಡೆ ಮಾಡಲಿದ್ದಾರೆ.
ವಿಧಾನ ಪರಿಷತ್ ಸದಸ್ಯ ವೀರಣ್ಣ ಮತ್ತಿಕಟ್ಟಿ, ಶಾಸಕ ವಿನಯ ಕುಲಕರ್ಣಿ, ಮಹಾದೇವ ಹೊರಟ್ಟಿ ಭಾಗವಹಿಸುತ್ತಾರೆ. ಮಾಸ್ಟರ್ ಶಿವಕುಮಾರ ಪಾಟೀಲ ಸಂಗೀತ ಸೇವೆ ನೀಡಲಿದ್ದು, ಪ್ರೊ. ಶಂಭು ಹೆಗಡಾಳ ನಿರೂಪಿಸಲಿದ್ದಾರೆ.
ಡಾ. ನಂದಾ ಪಾಟೀಲರ ಸಂಗೀತ ಸೇವೆಗೆ ಗಾನಕೋಗಿಲೆ, ಹಳಕಟ್ಟಿ ಶ್ರೀ ಹಾಗೂ ಸಂಸ್ಕೃತಿ ಸುಗಂಧ ಪ್ರಶಸ್ತಿಗಳು ಬಂದಿವೆ. ಅಲ್ಲದೇ, ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ರಾಜ್ಯಮಟ್ಟ ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ, ಜಾನಪದ ಸಂಗೀತದಲ್ಲಿ ಡಾಕ್ಟರೇಟ್ ಗಳಿಸಿದ್ದು, ಹಲವರಿಗೆ ಸಂಶೋಧನಾ ಮಾರ್ಗದರ್ಶಕರಾಗಿದ್ದಾರೆ.
2009ರಲ್ಲಿ ವಿದ್ಯಾವರ್ಧಕ ಸಂಘದಲ್ಲಿ ಡಾ. ನಂದಾ ಪಾಟೀಲ ವಚನ ಸಂಗೀತ ದತ್ತಿ ಉಪನ್ಯಾಸ ಸ್ಥಾಪಿಸಲಾಗಿದೆ. ಹಾಗಾಗಿ, ಸಂಘದಲ್ಲಿ ಪ್ರತಿವರ್ಷ ನಂದಾ ಅವರ ಸಂಗೀತ ಪುರಸ್ಕಾರ ನೀಡಲಾಗುತ್ತಿದೆ ಎಂದು ಕರ್ನಾಟಕ ವಿವಿ ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕ ಡಾ. ಮಲ್ಲಿಕಾರ್ಜುನ ಪಾಟೀಲ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

