ಪರೀಕ್ಷೆ ಎಲ್ಲದಕ್ಕೂ ಮಾನದಂಡವಲ್ಲ: ನ್ಯಾ. ಕುಮಾರ
ಕನ್ನಡಪ್ರಭ ವಾರ್ತೆ, ಧಾರವಾಡ, ಆ. 6
ಪರೀಕ್ಷೆಯೇ ಎಲ್ಲದಕ್ಕೂ ಮಾನದಂಡವಲ್ಲ. ವಿದ್ಯಾರ್ಥಿಗಳು ಜೀವನದಲ್ಲಿ ಪರಿಸ್ಥಿತಿಯನ್ನು ಎದುರಿಸಲು ಕಲಿತರೆ ಎಂಥ ಸಾಧನೆಯನ್ನಾದರೂ ಮಾಡಬಹುದು ಎಂದು ಹೈಕೋರ್ಟ್ ನ್ಯಾಯಮೂರ್ತಿ ಎನ್. ಕುಮಾರ ಹೇಳಿದರು.
ಶಾಂತೇಶ ಎಜ್ಯುಕೇಶನ್ ಸೊಸೈಟಿ ವಿದ್ಯಾ ಪಿ. ಹಂಚಿನಮನಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಂಘ, ಕ್ರೀಡಾ ಹಾಗೂ ಸಾಂಸ್ಕೃತಿಕ ವಿಭಾಗಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸೋಮಾರಿತನ, ಹೊಟ್ಟೆಕಿಚ್ಚಿನ ಗುಣಗಳನ್ನು ಕೈ ಬಿಟ್ಟು ಜೀವನ ಕಲಿಸುವ ವಿದ್ಯೆಯನ್ನು ತಮ್ಮದಾಗಿಸಿಕೊಳ್ಳಬೇಕು. ಅಂದಾಗ ಉತ್ತಮ ಉದ್ಯೋಗ ದೊರೆಯುವುದಲ್ಲದೆ ಒಳ್ಳೆಯ ಭವಿಷ್ಯ ದೊರೆಯುತ್ತದೆ ಎಂದರು.
ನ್ಯಾಯಮೂರ್ತಿ ಅರವಿಂದ ಕುಮಾರ ಮಾತನಾಡಿ, ಇಂದಿನ ವಿದ್ಯಾರ್ಥಿಗಳೇ ದೇಶದ ಸಂಪತ್ತು. ಶಕ್ತಿ, ಸ್ವಾಭಿಮಾನ ಅವರಲ್ಲಿ ಇರಬೇಕು. ಈ ಮೂಲಕ ದೇಶವನ್ನು ರಕ್ಷಿಸಿ ಜಗತ್ತಿನಲ್ಲಿಯೇ ಅಭಿವೃದ್ಧಿ ಹೊಂದಿದ ದೇಶವನ್ನಾಗಿಸಬೇಕು ಎಂದರು.
ಪ್ರಾಚಾರ್ಯ ಡಾ. ಎಸ್.ಎ. ಜೋಶಿ ಪ್ರಾಸ್ತಾವಿಕ ಮಾತನಾಡಿದರು. ಶಾಂತೇಶ ಎಜ್ಯುಕೇಶನ್ ಸೊಸೈಟಿ ಉಪಾಧ್ಯಕ್ಷ ಡಾ. ಎಸ್.ಜಿ. ನೌಡಗೌಡರ, ಸ್ಫೂರ್ತಿ ಕಿರೇಸೂರ, ವಿದ್ಯಾ ಭಜಂತ್ರಿ ಇದ್ದರು. ನಾರಾಯಣ ಶಾನಭಾಗ ಪ್ರಾರ್ಥಿಸಿದರು. ನಿಹಾರಿಕಾ ಹೊನಕೇರಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

