ದೈಹಿಕ ಶಿಕ್ಷಣದಿಂದ ಮಕ್ಕಳ ಮನೋವಿಕಾಸ
ಧಾರವಾಡ: ದೈಹಿಕ ಶಿಕ್ಷಣದಿಂದ ಮಕ್ಕಳಲ್ಲಿ ಸ್ಪರ್ಧಾತ್ಮಕ ಹಾಗೂ ಕ್ರೀಡಾ ಮನೋಭಾವನೆ ಮೂಡಲಿದ್ದು, ಕ್ರೀಡೆಗಳಲ್ಲಿ ಹೆಚ್ಚು ಸಕ್ರಿಯವಾಗಿ ಪಾಲ್ಗೊಳ್ಳಲು ಪ್ರೋತ್ಸಾಹಿಸಿದಂತಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ್ ಪದಕಿ ಹೇಳಿದರು.
ಇಲ್ಲಿನ ಗಾಂಧಿನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬಾಲನಂದನ ಟ್ರಸ್ಟ್ ಆಯೋಜಿಸಿದ್ದ ಮಾಳಮಡ್ಡಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರ ಎಲ್ಲ ಮಕ್ಕಳಲ್ಲಿ ಕ್ರೀಡಾ ಸ್ಫೂರ್ತಿ ತುಂಬುವ ಉದ್ದೇಶದಿಂದ ಪ್ರತಿವರ್ಷ ಎಲ್ಲ ಶಾಲೆಗಳಲ್ಲಿ ಕ್ರೀಡಾಕೂಟ ಆಯೋಜಿಸುತ್ತಿದೆ. ಇದರಿಂದ ಮಕ್ಕಳು ತಮ್ಮಲ್ಲಿ ಹುದುಗಿರುವ ಕ್ರೀಡಾ ಸಾಮರ್ಥ್ಯ ಪ್ರದರ್ಶಿಸುವ ಅವಕಾಶ ಮಾಡಿಕೊಡಲಾಗಿದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಎಂ.ಬಿ. ಕರ್ಜಗಿ, ಆಟದಲ್ಲಿ ಸೋಲೆ ಗೆಲವಿನ ಸೋಪಾನ. ಮಕ್ಕಳು ಸೋತ ತಕ್ಷಣ ನಿರಾಶರಾಗದೆ, ಮುಂದಿನ ತಯಾರಿಗೆ ಸಜ್ಜಾಗುವ ಮೂಲಕ ಗೆಲವಿನ ಹಾದಿ ತುಳಿಯುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.
ವಿಜಯ ಮೆಳವಂಕಿ, ಗಾಂಧಿನಗರ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಗೋಪಾಲ ನಾಯಕ, ಬಾಲನಂದನ ಟ್ರಸ್ಟ್ ಅಧ್ಯಕ್ಷೆ ಪ್ರೀತಿ. ಎನ್.ಕೆ., ಕಾರ್ಯದರ್ಶಿ ಶಂಕ್ರಮ್ಮ ಕಲಘಂಟಿ, ಶಿಕ್ಷಕರಾದ ಎಂ.ಟಿ. ಇಬ್ರಾಹಿಂಪುರ, ಎಸ್.ಎನ್. ಗಂಗಾವತಿ ಇದ್ದರು. ಪಿ.ಐ. ಮದ್ಲೂರ ಸ್ವಾಗತಿಸಿದರು. ಎನ್.ವೈ. ನರಗುಂದ ನಿರೂಪಿಸಿದರು. ಎಸ್.ಆರ್. ಕಾಮಗೊಂಡ ವಂದಿಸಿದರು. ಎ.ಎನ್. ಮುತ್ತಗಿ ಪ್ರತಿಜ್ಞಾವಿಧಿ ಬೋಧಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

