ಧಾರವಾಡ

24ಕ್ಕೆ ಧಾರವಾಡ, 31ಕ್ಕೆ ಗುಲ್ಬರ್ಗ ಕಾಯಂ ಪೀಠ ಉದ್ಘಾಟನೆ

Published On :

ಕನ್ನಡಪ್ರಭ ವಾರ್ತೆ, ಧಾರವಾಡ, ಆ. 9
ಹಲವು ದಶಕಗಳ ಬೇಡಿಕೆಯಂತೆ 2008ರ ಜುಲೈನಲ್ಲಿ ಆರಂಭವಾಗಿದ್ದ ಧಾರವಾಡ ಮತ್ತು ಗುಲ್ಬರ್ಗ ಹೈಕೋರ್ಟ್ ಕಾಯಂ ಪೀಠಗಳ ಉದ್ಘಾಟನೆಗೆ ಮಹೂರ್ತ ನಿಗದಿಯಾಗಿದೆ.
ಗುರುವಾರ ಬೆಂಗಳೂರಿನಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಧಾರವಾಡದಲ್ಲಿ ಆ.24 ಹಾಗೂ ಗುಲ್ಬರ್ಗದಲ್ಲಿ ಆ.31ರಂದು ಪೀಠ ಉದ್ಘಾಟನೆಗೆ ದಿನ ನಿಗದಿಗೊಳಿಸಲಾಗಿದೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪಿ. ಸದಾಶಿವಂ, ಕರ್ನಾಟಕದ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಾಘೇಲಾ, ಕೇಂದ್ರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಎರಡೂ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಸಕಲ ತಯಾರಿ ಮಾಡಿಕೊಳ್ಳಲು ಸಭೆಯಲ್ಲಿ ಪಾಲ್ಗೊಂಡಿದ್ದ ಗುಲ್ಬರ್ಗ ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನ ಕುಮಾರ ಹಾಗೂ ಧಾರವಾಡ ಜಿಲ್ಲಾಧಿಕಾರಿ ಸಮೀರ ಶುಕ್ಲಾರಿಗೆ ಸೂಚಿಸಲಾಗಿದೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.