ಧಾರವಾಡ

ನೀರು ಬಂದ್ ಮಾಡಬೇಡಿ: ಕೋನರಡ್ಡಿ

Published On :

ನವಲಗುಂದ: ಯಾವುದೇ ಕಾರಣಕ್ಕೂ ಮಲಪ್ರಭಾ ಬಲದಂಡೆ ಕಾಲುವೆಗೆ ಹರಿಸುತ್ತಿರುವ ನೀರನ್ನು ಬಂದ್ ಮಾಡಬಾರದು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ತಾಲೂಕಿನ ರೈತರು ಅಲ್ಪ-ಸ್ವಲ್ಪ ಮಳೆಯಿಂದ ತಮ್ಮ ಜಮೀನುಗಳಲ್ಲಿ ಬಿತ್ತನೆ ಕಾರ್ಯ ಮಾಡಿದ್ದು, ಆದರೆ ಈಗ ಇತ್ತೀಚಿಗೆ ಮಳೆ ಬರದಿರುವುದರಿಂದ ಬೆಳೆಗಳು ಒಣಗುತ್ತಿವೆ. ಆದ್ದರಿಂದ ಆ. 10ರಂದು ಸವದತ್ತಿಯಲ್ಲಿ ಏರ್ಪಡಿಸಿದ್ದ ಮಹಾಮಂಡಳದ ತುರ್ತು ಸಭೆಯಲ್ಲಿ ನೀರು ಹರಿಸಲು ನಿರ್ಧರಿಸಲಾಗಿದೆ. ಯಾವುದೇ ಕಾರಣಕ್ಕೂ ನೀರು ಹರಿಯುವುದನ್ನು ಬಂದ ಮಾಡಬಾರದು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಮಲಪ್ರಭಾ ನೀರು ಬಳಕೆದಾರರ ಮಹಾಮಂಡಳಕ್ಕೆ ಎಚ್ಚರಿಕೆ ನೀಡಿದ್ದಾರೆ.
ಮಲಪ್ರಭಾ ಬಲದಂಡೆ ಕಾಲುವೆಯ ಶಿರೂರು ಬಳಿ ಇರುವ ಅಕ್ವಿಡೆಕ್ಟ್ ಒಡೆದ ಪರಿಣಾಮ ತಾತ್ಕಾಲಿಕವಾಗಿ ಪೈಪ್‌ಲೈನ್ ಜೋಡಣೆ ಮಾಡಿ ನೀರು ಹರಿಸಲಾಗುತ್ತಿದೆ. ಇದರಿಂದಾಗಿ ಕೇವಲ 450 ಕ್ಯುಸೆಕ್ ನೀರು ಮಾತ್ರ ರೈತರಿಗೆ ಸಿಗಲಿದೆ. ಟೇಲ್ ಎಂಡ್ ರೈತರಿಗೆ ನೀರು ಸಿಗಬೇಕಾದರೆ ರೈತರು ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಲೋಕನಾಥ ಹೆಬಸೂರು, ರೈತ ಮುಖಂಡ ವೀರಣ್ಣ ನೀರಲಗಿ ಮೊದಲಾದವರು ಉಪಸ್ಥಿತರಿದ್ದರು.

ಬರ ಪೀಡಿತವೆಂದು ಘೋಷಿಸಿ
ರಾಜ್ಯದಲ್ಲಿ 51 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಆದರೆ, ನವಲಗುಂದ ತಾಲೂಕು ಸತತ ಬರಗಾಲಕ್ಕೆ ತುತ್ತಾಗಿದ್ದರೂ ಬರಗಾಲ ಪ್ರದೇಶವೆಂದು ಘೋಷಣೆ ಮಾಡದೇ ಅನ್ಯಾಯ ಮಾಡಲಾಗಿದೆ. ಕಾರಣ ತಾಲೂಕನ್ನು ಬರಗಾಲ ಪೀಡಿತವೆಂದು ಘೋಷಣೆ ಮಾಡಬೇಕು, ಅಡಿಕೆ ಬೆಳೆಗಾರರ ಸಾಲ ಮನ್ನಾ ಮಾಡಿದಂತೆಯೇ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ತಾಲೂಕಿನ ರೈತರಿಗೆ ವಿಶೇಷ ಪ್ಯಾಕೆಜ್ ಘೋಷಣೆ ಮಾಡಿ ರೈತರನ್ನು ರಕ್ಷಿಸಬೇಕೆಂದು ಶಾಸಕ ಎನ್.ಎಚ್. ಕೋನರಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.