ಧಾರವಾಡ

ಹೋರಾಟಕ್ಕೆ ವಕೀಲರ ಬೆಂಬಲ

Published On :

ಧಾರವಾಡ: ಕಳಸಾ ಬಂಡೂರಿ ನಾಲಾಗಳಿಗೆ ಶೀಘ್ರವೇ ಮಲಪ್ರಭಾ ನೀರು ಬಿಡಬೇಕೆಂದು ಒತ್ತಾಯಿಸಿ ಕಳಸಾ ಬಂಡೂರಿ ನಾಲಾ ಹೋರಾಟ ಸಮಿತಿ ನಡೆಸುತ್ತಿರುವ ಹೋರಾಟಕ್ಕೆ ಬುಧವಾರ ವಕೀಲರ ಸಂಘದ ಪದಾಧಿಕಾರಿಗಳು ಬೆಂಬಲ ಸೂಚಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಇಲ್ಲಿನ ಸಿವಿಲ್ ಕೋರ್ಟ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ವಕೀಲರು, ಈ ಯೋಜನೆಗಾಗಿ ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ರೈತ ಸಂಘಟನೆ, ಸಂಸ್ಥೆಗಳು ಬುಧವಾರ ಬಂದ್‌ಗೆ ಕರೆ ನೀಡಿದ್ದವು. ಅನೇಕ ವರ್ಷಗಳಿಂದ ಈ ಹೋರಾಟ ನಡೆಯುತ್ತಿದೆ.
ಈ ಹೋರಾಟಕ್ಕೆ ಪ್ರತಿಫಲ ಸಿಕ್ಕರೆ, ಹುಬ್ಬಳ್ಳಿ- ಧಾರವಾಡ ಅವಳಿನಗರಗಳಿಗೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯುತ್ತದೆ. ಅಲ್ಲದೆ, ಐದು ಜಿಲ್ಲೆಗಳ ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸಬಹುದಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಕಳಸಾ ಬಂಡೂರಿ ನಾಲಾಕ್ಕೆ ಮಲಪ್ರಭಾ ನದಿ ನೀರು ಜೋಡಣೆ ಶೀಘ್ರವೇ ಅನುಷ್ಠಾಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೂಕ್ತಕ್ರಮ ಕೈಗೊಳ್ಳಬೇಕು. ಅಲ್ಲದೆ, ಈ ಕುರಿತಂತೆ ಕಾನೂನಾತ್ಮಕವಾದ ಕ್ರಮ ಕೈಗೊಳ್ಳುವ ಮೂಲಕ ಮಹಾದಾಯಿ ಯೋಜನೆ ಅಂತಿಮಪಡಿಸಿ, ಕಳಸಾ ಬಂಡೂರಿ ಯೋಜನೆಗೆ ಮಧ್ಯಂತರ ಅನುಮತಿ ತೆಗದುಕೊಂಡು ಕಾಮಗಾರಿ ಪೂರೈಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ವಿ.ಡಿ. ಕಾಮರಡ್ಡಿ, ಸದಾನಂದ ಮುಂದಿನಮನಿ, ಅಶೋಕ ಲಕ್ಕುಂಡಿ, ರಾಜಶೇಖರ ಅಂಗಡಿ, ಸಂತೋಷ ಶೀಗಿಹಳ್ಳಿ, ಮಂಜುನಾಥ ಮುಗ್ಗನವರ, ಸಂತೋಷ ಕಮತರ, ರಾಜು ಕೋಟಿ, ನಾಗರಾಜ ಹುಬ್ಬಳ್ಳಿ, ಆರ್.ವೈ. ಠಾಕೂರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.