ಧಾರವಾಡ

ಕಲಾವಿದರು ಹೊಂದಾಣಿಕೆ ಮನೋಭಾವ ಹೊಂದಿ

Published On :

ಕನ್ನಡಪ್ರಭ ವಾರ್ತೆ, ಧಾರವಾಡ, ಆ. 18
ವಿಶ್ವ ಛಾಯಾಚಿತ್ರ ದಿನಾಚರಣೆ ಅಂಗವಾಗಿ ಇಲ್ಲಿನ ಸರ್ಕಾರಿ ಆರ್ಟ್ ಗ್ಯಾಲರಿಯಲ್ಲಿ ಭಾನುವಾರ ದೃಷ್ಟಿ, ಸೃಷ್ಟಿ ಛಾಯಾಚಿತ್ರ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.
ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದ ಎಸ್‌ಡಿಎಂ ಸಂಸ್ಥೆಯ ವೈದ್ಯಕೀಯ ನಿರ್ದೇಶಕ ಡಾ. ನಿರಂಜನಕುಮಾರ್, ಛಾಯಾಚಿತ್ರ ಪ್ರದರ್ಶನ ಏರ್ಪಡಿಸುವುದು ಸುಲಭದ ಮಾತಲ್ಲ. ಕಲಾವಿದರು ಪರಸ್ಪರ ಹೊಂದಾಣಿಕೆ ಮನೋಭಾವ ಹೊಂದಿರಬೇಕು. ಈ ಮೂಲಕ ಉತ್ತಮವಾದ ಕಲೆಗಳನ್ನು ಜನರ ಮುಂದೆ ಅಭಿವ್ಯಕ್ತಗೊಳಿಸಬೇಕು ಎಂದರು.
ಟಾಟಾ ಮಾರ್ಕೋಪೋಲೋ ಕಂಪನಿ ಹಿರಿಯ ವ್ಯವಸ್ಥಾಪಕ ರಮೇಶ ವಿಜಾಪುರ ಮಾತನಾಡಿ, ಹವ್ಯಾಸಿ ಛಾಯಾಚಿತ್ರಗ್ರಾಹಕರು ಈ ರೀತಿಯಾದ ಉತ್ತಮವಾದ ಛಾಯಾಚಿತ್ರಗಳನ್ನು ಪ್ರದರ್ಶನ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಕನ್ನಡಕ್ಕೆ ದೊರೆತ ಎಂಟು ಜ್ಞಾನಪೀಠ ಪ್ರಶಸ್ತಿಗಳಲ್ಲಿ ಧಾರವಾಡಕ್ಕೆ ಸಿಂಹ ಪಾಲಿದೆ. ನಗರ ಚಿಕ್ಕದಾಗಿದ್ದರೂ ಉತ್ತಮವಾದ ವಾತಾವರಣ ಹೊಂದಿದ್ದು, ಅನೇಕ ರೀತಿಯ ಉತ್ತಮವಾದ ಛಾಯಾಚಿತ್ರಗಳನ್ನು ಸೆರೆ ಹಿಡಿಯಲು ಅವಕಾಶವಿದೆ ಎಂದು ತಿಳಿಸಿದರು.
ಟಾಟಾ ಮಾರ್ಕೋಪೋಲೋ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಎಂ.ಎಸ್.ಆರ್.ಕೆ. ಪ್ರಸಾದ್ ಹಾಗೂ ಸರ್ಕಾರಿ ಚಿತ್ರಕಲಾ ಕಾಲೇಜಿನ ಪ್ರಾಚಾರ್ಯ ಎನ್.ಎಂ. ದಾಟನಾಳ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.