ಧಾರವಾಡ

ನಾಗರಾಜ ಛಬ್ಬಿ ಗೆಲವು ನಿಶ್ಚಿತ: ರಾಜಶೇಖರ ಮೆಣಸಿನಕಾಯಿ

Published On :

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಆ. 18
ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕಡಿಮೆ ಅವಧಿಯಲ್ಲಿ ಹೆಚ್ಚು ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿರುವುದರಿಂದ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಅವಿಭಜಿತ ಧಾರವಾಡ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ನಾಗರಾಜ ಛಬ್ಬಿ ಗೆಲ್ಲುವುದು ನಿಶ್ಚಿತ ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಹಾಗೂ ಎಪಿಎಂಸಿ ಸದಸ್ಯ ರಾಜಶೇಖರ ಮೆಣಸಿನಕಾಯಿ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಅಂಚಟಗೇರಿ ಗ್ರಾಪಂ ಕಾರ್ಯಾಲಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಿಧಾನ ಪರಿಷತ್ ಉಪ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ತಾಪಂ ಮಾಜಿ ಅಧ್ಯಕ್ಷ ರುದ್ರಪ್ಪ ಬಿಡನಾಳ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಸುಮಾ ಗಬ್ಬೂರ ಅಧ್ಯಕ್ಷತೆ ವಹಿಸಿದ್ದರು. ಅಂಚಟಗೇರಿ ಗ್ರಾಪಂ ವ್ಯಾಪ್ತಿಯ ಅಂಚಟಗೇರಿ, ಚವರಗುಡ್ಡ, ಚಿನ್ನಾಪುರ, ತಿಮ್ಮಸಾಗರ ಗ್ರಾಪಂ ಸದಸ್ಯರಾದ ಉಮೇಶಗೌಡ ಪಾಟೀಲ, ಮಾಬೂಸಾಬ ಹಳ್ಳಿಕೇರಿ, ಸೋಮಣ್ಣ ವಾಲ್ಮೀಕಿ, ಮಹಾದೇವಪ್ಪ ದೊಡ್ಡಮನಿ, ಶರೀಫಸಾಬ ಲಾಲಗಟ್ಟಿ, ಮಹಮ್ಮದಸಾಬ ಶೇಖಸನದಿ, ಸಿದ್ದು ಕೋಟಿ, ಇಮಾಮಸಾಬ ಮಾಳಗಿಮನಿ, ಕಾಳಪ್ಪ ಹರಿಜನ, ದೇವಕ್ಕ ಭರಮಡ್ಡಿ, ಮಾಬೂಬಬಿ ಹತ್ತಿ, ಮೋಹನ ಹಿರೇಮನಿ, ಪರಶುರಾಮ ಕಾಳೆ ಮತ್ತಿತರರು ಹಾಜರಿದ್ದರು.
--
ಮುತ್ತಣ್ಣ ಭಜಂತ್ರಿಗೆ ಡಾಕ್ಟರೇಟ್ ಪದವಿ ಪ್ರದಾನ
ಹುಬ್ಬಳ್ಳಿ: ಧಾರವಾಡ ಕರ್ನಾಟಕ ಕಲಾ ಮಹಾವಿದ್ಯಾಲಯದ ಭಾಷಾ ವಿಜ್ಞಾನ ವಿಭಾಗದ ಅತಿಥಿ ಉಪನ್ಯಾಸಕ ಮುತ್ತಣ್ಣ ಯಮನಪ್ಪ ಭಜಂತ್ರಿ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರಮ ಜನಾಂಗದ ಭಾಷೆ ಹಾಗೂ ಅದರ ಮೇಲೆ ದೇಶಿ ಭಾಷೆಗಳ ಪ್ರಭಾವ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಪ್ರದಾನ ಮಾಡಿದ್ದು, ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎಂ. ಮುರಿಗೆಪ್ಪ ಅವರ ಮಾರ್ಗದರ್ಶನದಲ್ಲಿ ಡಾ. ಮುತ್ತಣ್ಣ ಸಂಶೋಧನಾ ಪ್ರಬಂಧ ಮಂಡಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.