ನಾನು ನಕಲಿ ವಕೀಲನಲ್ಲ
ಧಾರವಾಡ: ವೈಯಕ್ತಿಕ ಹಿತಾಸಕ್ತಿಗಾಗಿ ಕೆಲ ವಕೀಲರು ನನ್ನನ್ನು ನಕಲಿ ವಕೀಲ ಎಂದು ಆರೋಪಿಸುವ ಮೂಲಕ ತಮಗೆ ಮಾನಹಾನಿ ಮಾಡಿದ್ದಾರೆ ಎಂದು ಮಾಳಮಡ್ಡಿಯ ನಿವಾಸಿ ಕೃಷ್ಣಮೂರ್ತಿ ಕುಲಕರ್ಣಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತಮ್ಮ ಗೆಳೆಯ ರೋಹನ್ಕುಮಾರ್ ಅವರ ಪತ್ನಿ ದಾಖಲಿಸಲಾಗಿರುವ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ನಾನೂ ನ್ಯಾಯಾಲಯಕ್ಕೆ ಹೋಗಿದ್ದೆ. ಈ ಸಂದರ್ಭ ಕೆಲವರು ಪಿತೂರಿ ನಡೆಸಿ ನಾನೂ ವಂಚಕ ಮತ್ತು ನಕಲಿ ವಕೀಲ ಎಂದು ಹೇಳಿಕೊಂಡು ಜನರೊಂದಿಗೆ ವ್ಯವಹರಿಸುತ್ತಿದ್ದೇನೆ ಎಂಬ ಪೂರ್ವಗ್ರಹಪೀಡಿತ ಉದ್ದೇಶದಿಂದ ಕೆಲವರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಈ ಕುರಿತಂತೆ ಶನಿವಾರ ನ್ಯಾಯ ಕೇಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯ ಸಿಗುವ ನಿರೀಕ್ಷೆಯಲ್ಲಿದ್ದೇನೆ ಎಂದಿದ್ದಾರೆ.
ಅಡುಗೆ ಅನಿಲ ಸೋರಿಕೆ
ಹುಬ್ಬಳ್ಳಿ: ಅಡುಗೆ ಅನಿಲ ಸೋರಿಕೆಯಾಗಿ ಮನೆಯಲ್ಲಿದ್ದ ಫ್ರಿಡ್ಜ್, ಮಿಕ್ಸರ್ ಸೇರಿದಂತೆ ಸುಮಾರು 15 ಸಾವಿರ ಮೌಲ್ಯದ ದಿನಬಳಕೆ ವಸ್ತುಗಳು ಸುಟ್ಟಿರುವ ಘಟನೆ ನವನಗರದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ನವನಗರದ ಏಳನೇ ಕ್ರಾಸ್ನಲ್ಲಿರುವ ಬಸಪ್ಪ ದುದಮಿ ಎಂಬುವವರ ಮನೆಯಲ್ಲಿಯೇ ಈ ದುರ್ಘಟನೆ ನಡೆದಿದೆ. ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

