ಧಾರವಾಡ

ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ

Published On :

ಕನ್ನಡಪ್ರಭ ವಾರ್ತೆ, ಧಾರವಾಡ, ಆ. 18
ಯಶಸ್ವಿ ವ್ಯಕ್ತಿಯಾಗಬೇಕಾದರೆ ಯಾವುದೇ ಕಿರುದಾರಿ ಇಲ್ಲ. ಸತತ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಕೆ.ಆರ್. ದುರ್ಗಾದಾಸ ಹೇಳಿದರು.
ಇಲ್ಲಿನ ಸುವರ್ಣ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಾಂಸ್ಕೃತಿಕ, ಎನ್‌ಎಸ್‌ಎಸ್ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಮನೋಭಾವ ಇರಬೇಕು. ಇಲ್ಲದಿದ್ದರೆ ವಿದ್ಯಾರ್ಥಿ ಜೀವನ ನಿರರ್ಥಕ. ವಿದ್ಯಾರ್ಥಿಗಳು ಪೂರ್ವ ತಯಾರಿಯೊಂದಿಗೆ ಪರೀಕ್ಷೆಗಳನ್ನು ಎದುರಿಸಬೇಕು. ಇದರಿಂದ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಗುರಿ ಸಾಧಿಸಲು ಸತತ ಪರಿಶ್ರಮ ಪಡಬೇಕು ಎಂದು ತಿಳಿಸಿದರು.
ಸಮಾಜದಲ್ಲಿನ ಹಿರಿಯರು ಕೂಡ ವಿಶ್ವವಿದ್ಯಾನಿಲಯದ ಅಧ್ಯಾಪಕರಿದ್ದಂತೆ, ಅವರ ಅನುಭವಗಳೇ ಯುವಕರಿಗೆ ಜೀವನ ಪಾಠ ನೀಡುತ್ತವೆ. ಆದ್ದರಿಂದ ಯುವಕರು ಹಿರಿಯರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು ಅವರ ಜೀವನದ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜ ಸುಧಾರಣೆಯಲ್ಲಿ ತೊಡಗಿಕೊಳ್ಳಬೇಕು ಎಂದರು.
ಬಿಸಿಐಸಿ ಸಂಯೋಜಕ ರಾಘವೇಂದ್ರ ಜಿ.ಎಸ್. ಮಾತನಾಡಿ, ವಿದ್ಯುದಮಾನ ಮಾಧ್ಯಮಗಳ ಹಾವಳಿಯಿಂದಾಗಿ ಪೂಜೆ, ಪುನಸ್ಕಾರಗಳತ್ತ ಜನರ ಒಲವು ಕಡಿಮೆಯಾಗುತ್ತಿದೆ. ಇದರಿಂದಾಗಿ ಯುವಕರು ಆರೋಗ್ಯಕರ ಸಮಾಜದ ಪರಿಕಲ್ಪನೆಯನ್ನು ಮರೆಯುತ್ತಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿನ ಸೆಮಿಸ್ಟರ್ ಪದ್ಧತಿಯಿಂದಾಗಿ ಕ್ರೀಡೆಗಳತ್ತ ವಿದ್ಯಾರ್ಥಿಗಳ ಗಮನ ಕಡಿಮೆಯಾಗುತ್ತಿದೆ. ಆದ್ದರಿಂದ ಕ್ರೀಡೆಗಳಿಗೆ ಹೆಚ್ಚಿನ ಉತ್ತೇಜನ ನೀಡುವ ಕೆಲಸ ಆಗಬೇಕಿದೆ ಎಂದರು.
ಸುವರ್ಣ ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷ ವಿಶ್ವನಾಥ ಅಮರಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸವಿತಾ ಅಮರಶೆಟ್ಟಿ, ಪ್ರಾಚಾರ್ಯ ಪ್ರಕಾಶ ಜೋಗಿನ, ಉಪಪ್ರಾಚಾರ್ಯ ಸುನೀಲ ಕುಕನೂರ, ಲೀಲಾವತಿ ಪಾಟೀಲ, ವಿಜಯಾ ಪಾಟೀಲ, ಮಂಜುನಾಥ ಅಡಿಗಲ್, ಗಂಗಾಧರ ಮರಳಿಹಳ್ಳಿ, ಸವಿತಾ ಹಿರೇಮಠ, ಶ್ವೇತಾ ಮುತ್ತಗಿ, ಶ್ವೇತಾ ಎನ್.ಎಂ ಇದ್ದರು.
ಮೃಣಾಲ ಜೋಶಿ ಹಾಗೂ ಶೋಭಾ ಕೋರಿಶೆಟ್ಟರ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.