ಧಾರವಾಡ

ಸಾಮಾಜಿಕ ಸಮಾನತೆಗೆ ಸರ್ವರೂ ಕೈಜೋಡಿಸಿ

Published On :

ಧಾರವಾಡ: ದೇಶದ ಏಳ್ಗೆಗೆ ಸರ್ವ ವರ್ಗಗಳ ಜನರಿಗೆ ಸಮಾನ ಅವಕಾಶ ಕಲ್ಪಿಸಲು ಎಲ್ಲರೂ ಪ್ರಯತ್ನ ಮಾಡಬೇಕೆಂದು ಜಿಲ್ಲಾಧಿಕಾರಿ ಸಮೀರ್ ಶುಕ್ಲ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ ಹಾಗೂ ನಿಗಮಗಳ ಆಶ್ರಯದಲ್ಲಿ ಮಂಗಳವಾರ ನಡೆದ ದೇವರಾಜ ಅರಸ್ ಅವರ 98ನೇ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಜನರು ಸಮಾಜದ ಮುಖ್ಯವಾಹಿನಿಯಲ್ಲಿ ಸೇರಬೇಕೆಂದು ದೇವರಾಜ ಅರಸ್ ಅವರು ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದರು. ಅವರ ಆಶಯಗಳ ಸಾಕಾರಕ್ಕೆ ನಮ್ಮೆಲ್ಲರ ಪ್ರಯತ್ನ ಬೇಕು. ದೇಶಕ್ಕೆ ರಾಜಕೀಯ ಸ್ವಾತಂತ್ರ್ಯ ದೊರೆತಿದೆ. ಆದರೆ, ಸಾಮಾಜಿಕ ಸ್ವಾತಂತ್ರ್ಯ ಇನ್ನೂ ಪೂರ್ಣವಾಗಿ ಎಲ್ಲರಿಗೂ ದೊರಕಬೇಕು. ಆ ನಿಟ್ಟಿನಲ್ಲಿ ಹಿಂದುಳಿದ, ಶೋಷಿತರ ಹಾಗೂ ದುರ್ಬಲರ ವರ್ಗಗಳ ಅಭಿವೃದ್ಧಿ ಕುರಿತು ದೇವರಾಜ ಅರಸ್ ಮಾಡಿದ ಚಿಂತನೆಗಳು ಪ್ರಸ್ತುತ ಎಂದರು.
ಮೌನೇಶ್ವರ ಧರ್ಮನಿಧಿ ಸಂಸ್ಥೆಯ ಅಧ್ಯಕ್ಷ ಶಿವಣ್ಣ ಬಡಿಗೇರ ಮಾತನಾಡಿದರು.
ಜಿಪಂ ಸಿಇಓ ಪಿ.ಎ. ಮೇಘಣ್ಣವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶಕುಮಾರ, ಐಎಎಸ್ ಪ್ರೋಬೇಶನರಿ ಅಧಿಕಾರಿ ಚಾರುಲತಾ ಇದ್ದರು. ಜಿಲ್ಲಾ ಹಿಂದುಳಿದ ವರ್ಗಗಳ ಅಧಿಕಾರಿ ಕೆ.ಎಚ್. ಚೆನ್ನೂರ ಸ್ವಾಗತಿಸಿದರು. ಆರ್.ಐ. ಶೇಖ್ ವಂದಿಸಿದರು. ಎಲ್.ವೈ. ಹಾಸಲಕರ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.