ಉಚಿತ ಯೋಗ ತರಬೇತಿ ಕಾರ್ಯಾಗಾರ
ಧಾರವಾಡ: ಇಲ್ಲಿನ ಸ್ವಾಮಿ ವಿವೇಕಾನಂದ ಜಿಲ್ಲಾ ಯೋಗ ಸ್ವಾಸ್ಥ್ಯ ಕೇಂದ್ರದ ವತಿಯಿಂದ ಅ. 25ರಿಂದ 30ರ ವರೆಗೆ ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಮಧುಮೇಹ ನಿಯಂತ್ರಣಕ್ಕಾಗಿ ಜಯನಗರದ ಈಶ್ವರ ದೇವಸ್ಥಾನದಲ್ಲಿ ಉಚಿತ ಯೋಗ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿದೆ. ಆಸಕ್ತರು ಮೊ: 99004 51397 ಸಂಪರ್ಕಿಸಿ.
ಸಂಗೀತ ನೃತ್ಯ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
ಧಾರವಾಡ: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಪ್ರಸಕ್ತ ವರ್ಷ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ನಡೆಸಲಿರುವ ವಿಶೇಷ ಸಂಗೀತ, ನೃತ್ಯ ಮತ್ತು ತಾಳವಾದ್ಯ ಪರೀಕ್ಷೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಮತ್ತು ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ, ತಾಳವಾದ್ಯ, ಭರತನಾಟ್ಯ, ಕುಚುಪುಡಿ ಹಾಗೂ ಕಥಕ್ ಪದ್ಧತಿಗಳಲ್ಲಿ ಈ ಪರೀಕ್ಷೆಗಳು ನಡೆಯಲಿವೆ. ಕಿರಿಯ ದರ್ಜೆ, ಹಿರಿಯ ದರ್ಜೆ, ವಿದ್ವತ್ಪೂರ್ವ ಮತ್ತು ವಿದ್ವತ್ ಅಂತಿಮ ಎಂಬ ನಾಲ್ಕು ವಿಧದ ಪರೀಕ್ಷೆಗಳಿಗೆ ಇಲ್ಲಿ ಅವಕಾಶವಿದೆ. ನೋಂದಾಯಿತ ಶಾಲೆಗಳು ಇಲ್ಲವೇ ಸಂಗೀತ ಶಿಕ್ಷಣ ಸಂಸ್ಥೆಗಳಿಂದ ಚಲನ್ ಮೂಲಕ ಹಣ ಪಾವತಿಸಿ ನಿಗದಿತ ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಅರ್ಜಿಗಳೊಂದಿಗೆ ಸೂಕ್ತ ದಾಖಲೆಗಳನ್ನು ಸಲ್ಲಿಸಲು ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರವಾಗಿರುವ ನಗರದ ಕಲಾಭವನದ ಎದುರಿಗೆ ಇರುವ ಶಿಕ್ಷಕಿಯರ ಸರ್ಕಾರಿ ತರಬೇತಿ ಸಂಸ್ಥೆಯಲ್ಲಿ ಅರ್ಜಿ ನಮೂನೆಗಳು ಲಭ್ಯವಿದ್ದು, ಭರ್ತಿ ಮಾಡಿದ ಅರ್ಜಿ ಸಲ್ಲಿಸಲು (ದಂಡ ಶುಲ್ಕ ರಹಿತ) ಆ. 29 ಅಂತಿಮ ದಿನ. ಹೆಚ್ಚಿನ ಮಾಹಿತಿಗೆ 080-22360108 ಸಂಪರ್ಕಿಸಬಹುದು ಎಂದು ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಪಾರ್ವತಿ ವಸ್ತ್ರದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಶ್ವಾಪುರದಲ್ಲಿ ಕಳ್ಳತನ
ಹುಬ್ಬಳ್ಳಿ: ಇಲ್ಲಿನ ಕೇಶ್ವಾಪುರದ ಮನೆಯೊಂದರ ಕಿಟಕಿ ಬಾಗಿಲು ತೆಗೆದು ಮನೆಯಲ್ಲಿರಿಸಿದ್ದ 5 ತೊಲೆಯ ಮಂಗಳಸೂತ್ರ ಮತ್ತು 3 ಸಾವಿರ ನಗದನ್ನು ಕಳ್ಳರು ಅಪಹರಿಸಿದ್ದಾರೆ ಎಂದು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಶ್ವಾಪುರ ನಿವಾಸಿ ವಿನಯಕುಮಾರ ಹನುಮಂತಸಾ ಕಬಾಡಿ ಅವರ ಮನೆಯ ಹಿಂಬದಿಯ ಕಿಟಕಿ ಬಾಗಿಲನ್ನು ಮುರಿದಿರುವ ಕಳ್ಳರು ಮಂಗಳಸೂತ್ರ ಮತ್ತು ಚಿನ್ನಾಭರಣ ಕಳ್ಳತನ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ರೇಣವ್ವ ಹೂಗಾರ ನಿಧನ
ಉಪ್ಪಿನ ಬೆಟಗೇರಿ: ಗ್ರಾಮದ ರೇಣವ್ವ ಸಿದ್ದಪ್ಪ ಹೂಗಾರ (92) ಇತ್ತೀಚೆಗೆ ನಿಧನ ಹೊಂದಿದರು. ರಾಜ್ಯ ಪ್ರಶಸ್ತಿ ವಿಜೇತ, ನಿವೃತ್ತ ಶಿಕ್ಷಕ ಸಂಗಪ್ಪ ಸಿದ್ದಪ್ಪ ಹೂಗಾರ ಅವರ ಮಾತೋಶ್ರೀ ಇವರಾಗಿದ್ದು, ಇಬ್ಬರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗ ಇದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

