ಧಾರವಾಡ

ಪ್ರದೀಪ ಶೆಟ್ಟರ್ ಗೆಲವು ಖಚಿತ: ಮಾಜಿ ಸಿಎಂ ಜಗದೀಶ್ ಶೆಟ್ಟರ್

Published On :

ಹುಬ್ಬಳ್ಳಿ: ಸ್ಥಳೀಯ ಸಂಸ್ಥೆಗಳಿಂದ ನಡೆಯುತ್ತಿರುವ ವಿಧಾನಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ ಅವರ ಗೆಲವು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಗುರುವಾರ, ವಿಧಾನಪರಿಷತ್ ಉಪಚುನಾವಣೆಗೆ ಮತ ಚಲಾಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಿಭಜಿತ ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ನಡೆಯುತ್ತಿರುವ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಜೆಡಿಎಸ್ ಕೂಡ ಕೈಜೋಡಿಸಿದ್ದು, ಜೆಡಿಎಸ್ ಸಭೆಗಳಲ್ಲಿ ಬಿಜೆಪಿ ನಾಯಕರು ಪಾಲ್ಗೊಂಡಿದ್ದಾರೆ ಅದೇ ರೀತಿ ಕುಂದಗೋಳದಲ್ಲಿ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾಜಿ ಶಾಸಕ ಎಂ.ಎಸ್. ಅಕ್ಕಿ, ಪಿ.ಸಿ. ಸಿದ್ದನಗೌಡರ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿ ಪರ ಮತ ಯಾಚಿಸಿದ್ದಾರೆ. ಹಾವೇರಿಯಲ್ಲಿ ಕೆಜೆಪಿಯ ಪ್ರಮುಖ ನಾಯಕರು ಪ್ರದೀಪ ಶೆಟ್ಟರ ಪರ ಮತ ಯಾಚಿಸಿದ್ದಾರೆ ಎಂದರು.
ಗದಗ ಜಿಲ್ಲೆಯಲ್ಲಿ ಕೆಜೆಪಿ ಮತ್ತು ಬಿಜೆಪಿ ಪ್ರಮುಖರು ಮತ್ತು ಕಾರ್ಯಕರ್ತರು ಒಟ್ಟಿಗೆ ಸೇರಿ ಪ್ರಚಾರ ಮಾಡಿದ್ದಾರೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಶೆಟ್ಟರ ಅವರ ಗೆಲವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭ ಪ್ರದೀಪ ಶೆಟ್ಟರ, ಲಿಂಗರಾಜ ವಾಲಿ, ಮಾಜಿ ಮೇಯರ್ ವೀರಣ್ಣ ಸವಡಿ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.