ಧಾರವಾಡ

ಹುಬ್ಬಳ್ಳಿಯಲ್ಲಿ ನಾಯಕರ ಮತದಾನ

Published On :

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಆ. 22
ಸ್ಥಳೀಯ ಸಂಸ್ಥೆಗಳಿಂದ ಗುರುವಾರ ನಡೆದ ರಾಜ್ಯ ವಿಧಾನಪರಿಷತ್ ಉಪಚುನಾವಣೆಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ಪ್ರಹ್ಲಾದ ಜೋಶಿ, ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿಯ ಜನಪ್ರತಿನಿಧಿಗಳು ಮತ ಚಲಾಯಿಸಿದ್ದಾರೆ.
ಮಹಾನಗರ ಪಾಲಿಕೆ ಕಚೇರಿ ಆವರಣದ ಮತದಾನ ಕೇಂದ್ರಕ್ಕೆ ಬೆಳಗ್ಗೆ ವಿಧಾನಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಮತ್ತು ಶಾಸಕ ಪ್ರಸಾದ ಅಬ್ಬಯ್ಯ ಆಗಮಿಸಿ ಮತ ಚಲಾಯಿಸಿದರು. ನಂತರ ಮಾಜಿ ಮುಖ್ಯಮಂತ್ರಿ ಮತ್ತು ಪ್ರಹ್ಲಾದ ಜೋಶಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರೊಂದಿಗೆ ಆಗಮಿಸಿ ಮತದಾನ ಮಾಡಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿಯ ಮುಖಂಡರಿಬ್ಬರು ಕಾಂಗ್ರೆಸ್‌ನ ನೂರು ದಿನಗಳ ಸಾಧನೆ ಶೂನ್ಯ ಎಂದು ಹೇಳಿದ್ದು ಅಲ್ಲದೇ ವಿಧಾನಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ ಗೆಲವು ಸಾಧಿಸಲಿದ್ದಾರೆ ಎಂದರು.
ಇದೇ ವೇಳೆ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡ ಮಹಾನಗರ ಪಾಲಿಕೆ ಸದಸ್ಯ ದೀಪಕ್ ಚಿಂಚೋರೆ, ಮಾಜಿ ಮೇಯರ್ ಪ್ರಕಾಶ ಕ್ಯಾರಕಟ್ಟಿ ಅವರನ್ನೊಳಗೊಂಡ ಕೈ ಪಡೆ ಮತದಾನ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿತು.
ಮಧ್ಯಾಹ್ನ 12ರ ಬಳಿಕ ವಿಧಾನಪರಿಷತ್ ಸದಸ್ಯ, ಮಾಜಿ ಸಚಿವ ಬಸವರಾಜ ಹೊರಟ್ಟಿ ಅವರು ಮಹಾನಗರ ಪಾಲಿಕೆ ಎಲ್ಲ ಜೆಡಿಎಸ್ ಸದಸ್ಯರೊಂದಿಗೆ ಮತದಾನ ಕೇಂದ್ರಕ್ಕೆ ಆಗಮಿಸಿದರು. ಮತದಾನ ಕೇಂದ್ರದಲ್ಲಿ ಹೊರಟ್ಟಿ ಬರುವಿಕೆ ಕಾಯುತ್ತಿದ್ದ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ ಅವರು ಮಾಜಿ ಸಚಿವ ಹೊರಟ್ಟಿ, ರಾಜಣ್ಣ ಕೊರವಿ, ಅಲ್ತಾಫ್ ಕಿತ್ತೂರ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.