ಧಾರವಾಡ

ಉಪಚುನಾವಣೆ: ಶೇ. 99.59 ಮತದಾನ

Published On :

ಧಾರವಾಡ: ಅವಿಭಜಿತ ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಗುರುವಾರ ನಡೆದ ವಿಧಾನಪರಿಷತ್ ಉಪಚುನಾವಣೆಯಲ್ಲಿ ಶೇ. 99.59ರಷ್ಟು ಮತದಾನವಾಗಿದೆ. ಅವಿಭಜಿತ ಧಾರವಾಡ ಜಿಲ್ಲೆಯ 7316 ಮತದಾರ ಪೈಕಿ 7,286 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ 134, ಹಾವೇರಿ ಜಿಲ್ಲೆಯಲ್ಲಿ 216 ಹಾಗೂ ಗದಗ ಜಿಲ್ಲೆಯಲ್ಲಿ 115 ಸೇರಿದಂತೆ ಒಟ್ಟು 465 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಧಾರವಾಡದ ತಹಸೀಲ್ದಾರ್ ಕಚೇರಿಯಲ್ಲಿ ಸ್ಥಾಪಿಸಿದ್ದ ಮತಗಟ್ಟೆಯಲ್ಲಿ ಶಾಸಕರಾದ ವಿನಯ ಕುಲಕರ್ಣಿ, ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯ ವೀರಣ್ಣ ಮತ್ತಿಕಟ್ಟಿ ಮತ ಚಲಾಯಿಸಿದರು. ಜಿಪಂ ಸದಸ್ಯರಾದ ಕಸ್ತೂರಿ ಅಷ್ಟಗಿ, ಬಸಮ್ಮ ಪ್ಯಾಟಿ, ಹನುಮವ್ವ ಬಿಂಗಿ, ಉಮಾದೇವಿ ಗುಡದರಿ, ಕಸ್ತೂರೆವ್ವ ಧಾರವಾಡ, ಪ್ರೇಮಾ ಕೋಮಾರ ದೇಸಾಯಿ, ವೆಂಕನಗೌಡ ಹಿರೇಗೌಡ್ರ ಮತ್ತು ತಾಪಂ ಸದಸ್ಯರು ಸಹ ಮತದಾನ ಮಾಡಿದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.