ಧಾರವಾಡ

ಇಂದು ಧಾರವಾಡ ಹೈಕೋರ್ಟ್ ಪೂರ್ಣ ಪೀಠ ಉದ್ಘಾಟನೆ

Published On :

ಧಾರವಾಡ: 2008ರ ಜುಲೈ 4ರಿಂದ ಕಾರ್ಯಾರಂಭ ಮಾಡಿದ ಇಲ್ಲಿನ ಹೈಕೋರ್ಟ್ ಸಂಚಾರಿ ಪೀಠವು ಪೂರ್ಣ ಪೀಠವೆಂದು ಘೋಷಣೆಯಾಗಿದ್ದು, ಶನಿವಾರ ಇದರ ಉದ್ಘಾಟನೆಯಾಗಲಿದೆ.
ಶನಿವಾರ ಬೆಳಿಗ್ಗೆ 11.30ಕ್ಕೆ ಪೀಠದ ಆವರಣದಲ್ಲಿ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಎಚ್.ಎಲ್. ದತ್ತು ಪೂರ್ಣ ಪೀಠವನ್ನು ಉದ್ಘಾಟಿಸುತ್ತಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಅಧ್ಯಕ್ಷತೆ ವಹಿಸುತ್ತಾರೆ. ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ. ಜಯಚಂದ್ರ, ಹೈಕೋರ್ಟ್ ನ್ಯಾಯಮೂರ್ತಿಗಳಾದ ಕೆ.ಎಲ್. ಮಂಜುನಾಥ, ಎನ್.ಕೆ. ಪಾಟೀಲ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ, ಅಡ್ವೋಕೇಟ್ ಜನರಲ್ ರವಿವರ್ಮಕುಮಾರ್, ರಾಜ್ಯ ವಕೀಲರ ಸಂಘದ ಅಧ್ಯಕ್ಷ ಮುನಿಯಪ್ಪ ಹಾಗೂ ಧಾರವಾಡ ಸಂಚಾರಿ ಪೀಠದ ವಕೀಲರ ಸಂಘದ ಅಧ್ಯಕ್ಷ ಬಿ.ಡಿ. ಹಿರೇಮಠ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಸುಮಾರು ಮೂರು ದಶಕಗಳ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಧಾರವಾಡ ಹಾಗೂ ಗುಲ್ಬರ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠಗಳನ್ನು ಆರಂಭಿಸಲಾಗಿದ್ದು, ಉತ್ತರ ಕರ್ನಾಟಕದ ಕಕ್ಷಿದಾರರಿಗೆ, ವಕೀಲ ಸಮುದಾಯಕ್ಕೆ ತುಂಬ ಅನುಕೂಲಕಾರಿಯಾಗಿತ್ತು. ಆದರೆ, ಇವೆರಡು ಬರೀ ಸಂಚಾರಿ ಪೀಠಗಳಾಗಿದ್ದರಿಂದ ನ್ಯಾಯಮೂರ್ತಿಗಳು ಪ್ರತಿ ತಿಂಗಳೂ ಬದಲಾಗುತ್ತಿದ್ದರು. ಈ ಪೀಠಗಳಲ್ಲಿ ದಾಖಲಾಗುವ ಹಾಗೂ ವಿಲೇವಾರಿಯಾಗುವ ಪ್ರಕರಣಗಳು ಜಾಸ್ತಿ ಇರುವ ಹಿನ್ನೆಲೆಯಲ್ಲಿ ಇತ್ತೀಚಿಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪೂರ್ಣ ಪೀಠ ಮಾಡಲು ಒಪ್ಪಿಗೆ ಸಿಕ್ಕಿತ್ತು. ಇದಕ್ಕೆ ರಾಷ್ಟ್ರಪತಿ ಅಂಕಿತವೂ ಬಿದ್ದಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.