ಸಾಹಿತ್ಯಾಸಕ್ತರ ಆದರ್ಶ ಪಾಲಿಸಿ: ಚೌಶೆಟ್ಟಿ
ಕುಂದಗೋಳ: ಹರ್ಡೆಕರ ಮಂಜಪ್ಪ ಅವರಂತಹ ಹಲವಾರು ಸಾಹಿತ್ಯಾಸಕ್ತರ ಆದರ್ಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ ಚೌಶೆಟ್ಟಿ ಅಭಿಪ್ರಾಯಪಟ್ಟರು.
ಬುಧವಾರ ರಾತ್ರಿ ಇಲ್ಲಿನ ಕಲ್ಯಾಣಪುರ ಬಸವಣ್ಣಜ್ಜನವರ ಕಲ್ಯಾಣ ಮಂಟಪದಲ್ಲಿ ಶರಣ ಸಾಹಿತ್ಯ ಪರಿಷತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರಥಮ ಶರಣ ಸಾಹಿತ್ಯ ಚಿಂತನಾಗೋಷ್ಠಿಯಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಶರಣ ಸಾಹಿತ್ಯ ಚಿಂತನಾ ಗೋಷ್ಠಿಗೆ ಚಾಲನೆ ನೀಡಿದ ಮೋಹನ್ ನಾಗಮ್ಮನವರ, ಅಧ್ಯಕ್ಷತೆ ವಹಿಸಿದ್ದ ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಡಿ. ಘೋರ್ಪಡೆ ಮಾತನಾಡಿದರು.
ಕಲ್ಯಾಣಪುರದ ಶ್ರೀ ಬಸಯ್ಯಜ್ಜ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಇದೇ ಸಂದರ್ಭದಲ್ಲಿ ಗಣೇಶ ಏಸುಗಡೆಯವರ ಅಸ್ತಿತ್ವದ ಕುರುಹು ಪುಸ್ತಕ ಹಾಗೂ ಶಿಕ್ಷಕಿ ರೇಣುಕಾ ಡೊಳ್ಳಿನ ಅವರ ವಚನ ಕುಸುಮ ಪುಸ್ತಕ ಬಿಡುಗಡೆಗೊಳಿಸಿ ಈರ್ವರನ್ನು ಸನ್ಮಾನಿಸಲಾಯಿತು.
ತಾಲೂಕು ಕಸಾಪ ಅಧ್ಯಕ್ಷ ಚಂದ್ರಶೇಖರ ಪಾಟೀಲ ಪರಿಷತ್ತಿ ದತ್ತಿ ನಿಧಿ ನೀಡಿದರು. ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ತಿಮ್ಮನಗೌಡ್ರ, ಡಾ. ಎನ್. ಎಸ್. ಕುಸುಗಲ್, ಶೇಖಣ್ಣ ಪ್ಯಾಟಿ, ವೀರಭದ್ರಪ್ಪ ಬೆಟಗೇರಿ ಹಾಗೂ ಇನ್ನೂ ಅನೇಕ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.
ವೀರೇಶ ಪ್ರಳಯಕಲ್ಮಠ ಸ್ವಾಗತಿಸಿದರು. ಕಾರ್ಯದರ್ಶಿ ಎಸ್.ಸಿ. ಶ್ಯಾನವಾಡ ನಿರೂಪಿಸಿದರು.
---
ನಾಳೆ ಪಂ. ವೆಂಕಟೇಶಕುಮಾರಗೆ ಅಭಿನಂದನೆ
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಆ. 25ರಂದು ಬೆಳಗ್ಗೆ 10.30ಕ್ಕೆ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾ ಭವನದಲ್ಲಿ ಪಂಡಿತ ಎಂ. ವೆಂಕಟೇಶಕುಮಾರ ಷಷ್ಟ್ಯಬ್ದ ಅಭಿನಂದನಾ ಸಮಾರಂಭ ಏರ್ಪಡಿಸಿದೆ. ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಖ್ಯಾತ ಸರೋದ ವಾದಕ ಮೈಸೂರಿನ ಪಂ. ತಾರಾನಾಥ, ಕವಿವಿ ಕುಲಪತಿ ಡಾ. ಎಚ್.ಬಿ. ವಾಲೀಕಾರ ಆಗಮಿಸುವರು. ಖ್ಯಾತ ಸಂಗೀತಗಾರ, ವಿದ್ವಾನ ಹಾಸಣಗಿ ಗಣಪತಿ ಭಟ್ಟರಿಂದ ಸಂಗೀತ ಜರುಗುವುದು. ಸಂಗೀತಗಾರರು, ಕಲಾವಿದರು, ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

