ಧಾರವಾಡ

ಅಕ್ರಮ ಗಣಿಗಾರಿಕೆ: ಶೀಘ್ರ ಪುನರ್ ಪರಿಶೀಲನಾ ಅರ್ಜಿ ಸಲ್ಲಿಕೆ

Published On :

ಧಾರವಾಡ: ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿರುವ ಹಾಗೂ ಅದಕ್ಕೆ ಸಂಬಂಧಿಸಿದ ವ್ಯವಹಾರಗಳ ವಿರುದ್ಧ ತನಿಖೆ ನಡೆಸಬೇಕೆಂದು ಸಲ್ಲಿಕೆಯಾಗಿದ್ದ ಮಧ್ಯಂತರ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ಹಸಿರು ಪೀಠ ಸೋಮವಾರ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್.ಆರ್. ಹಿರೇಮಠ ಪುನರ್ ಪರಿಶೀಲನಾ ಅರ್ಜಿ ಹಾಕಲು ತೀರ್ಮಾನಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಅರಣ್ಯ ಪೀಠ ಕಳೆದ ಏಪ್ರಿಲ್ 18ರಂದು 81 ಪುಟಗಳ ಆದೇಶ ನೀಡಿತ್ತು. ಆಗ 185-13ರ ಅನ್ವಯ ಬಾಕಿ ಉಳಿದ ಕೆಲಸಗಳ ಕುರಿತು ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ಸೋಮವಾರ ವಜಾಗೊಂಡಿದ್ದು, ಪುನರ್ ಪರಿಶೀಲನಾ ಅರ್ಜಿ ಹಾಕಲು ಸುಪ್ರೀಂ ಕೋರ್ಟ್ ಅವಕಾಶ ಕೊಟ್ಟಿದೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ರಾಜಕೀಯ ಪ್ರಭಾವ ಬೆಳೆಸಿಕೊಳ್ಳಲು ಮಾಧ್ಯಮದೆದುರು ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಇದಕ್ಕೆಲ್ಲ ನಾನು ಸೊಪ್ಪು ಹಾಕೋದಿಲ್ಲ. ಅಕ್ರಮ ಗಣಿಗಾರಿಕೆ ನಡೆಸಿದವರ ವಿರುದ್ಧ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.