ಧಾರವಾಡ

ಬಸ್ ಪಲ್ಟಿ ಮೂವರಿಗೆ ಗಾಯ

Published On :

ಕನ್ನಡಪ್ರಭ ವಾರ್ತೆ, ಧಾರವಾಡ, ಡಿ. 1
ಧಾರವಾಡ- ನವಲಗುಂದ ರಸ್ತೆಯ ಮಾರಡಗಿ ಕ್ರಾಸ್ ಬಳಿ ಭಾನುವಾರ ಬೆಳಗ್ಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಸೇತುವೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಮೂವರು ಗಾಯಗೊಂಡಿದ್ದಾರೆ.
ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಸಣ್ಣಪುಟ್ಟ ಗಾಯಗಳಾಗಿರುವ ಮೂವರು ಪ್ರಯಾಣಿಕರನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿದೆ.
ನವಲಗುಂದದಿಂದ ಬೈಲಹೊಂಗಲಕ್ಕೆ ಹೊರಟಿದ್ದ ಸಾರಿಗೆ ಸಂಸ್ಥೆಯ ಬಸ್ ಚಾಲಕ, ಇನ್ನೊಂದು ವಾಹನವನ್ನು ಹಿಂದಿಕ್ಕುವ ಭರದಲ್ಲಿ ಸೇತುವೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.
ಘಟನಾ ಸ್ಥಳಕ್ಕೆ ಎಎಸ್‌ಐ ಕಲೈಗಾರ ಮತ್ತು ಮುಖ್ಯ ಪೇದೆ ಎಫ್.ಎಂ.ಮಂಟೂರ ಭೇಟಿ ನೀಡಿದ್ದರು.
ನಿರ್ಲಕ್ಷ್ಯತನದಿಂದ ಬಸ್ ಚಾಲನೆ ಮಾಡಿದ ಎಸ್.ಜಿ. ಕಿತ್ತೂರ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.