ಧಾರವಾಡ

ವಡೋದರದಲ್ಲಿ ಹೊರನಾಡ ಕನ್ನಡ ಸಂಘಗಳ ಮಹಾಮೇಳ

Published On :

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ಗುಜರಾತ್ ರಾಜ್ಯದ ವಡೋದರ (ರೋಡಾ) ದಲ್ಲಿ ಡಿ. 8 ಹಾಗೂ 9ರಂದು ಅಖಿಲ ಭಾರತ ಹೊರನಾಡ ಕನ್ನಡ ಸಂಘಗಳ 8ನೇ ಮಹಾಮೇಳ ನಡೆಯಲಿದೆ.
ಡಿ. 8ರಂದು ಬೆಳಗ್ಗೆ 10.30ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಮಹಾಮೇಳ ಉದ್ಘಾಟಿಸುವರು. ಬರೋಡಾ ಜಿಲ್ಲಾಧಿಕಾರಿ ವಿನೋದ್ ರಾಯ್ ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ಪ್ರೊ. ಬಿ.ವಿ. ಗುಂಜೆಟ್ಟಿ ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಂದು ಮಧ್ಯಾಹ್ನ 2.30ಕ್ಕೆ ಗಾಂಧಿ ಚಿಂತನೆ ಎಂಬ ಮೊದಲ ಗೋಷ್ಠಿ ಜರುಗಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ. ಬಿ.ಕೆ.ಎಸ್. ವರ್ಧನ್ ಚಾಲನೆ ನೀಡಲಿದ್ದಾರೆ. ಕನ್ನಡದ ಕಾವ್ಯದಲ್ಲಿ ಗಾಂಧಿ ಎಂಬ ವಿಷಯ ಕುರಿತು ಡಾ. ಎಂ.ಡಿ. ಒಕ್ಕುಂದ, ಪ್ರಸ್ತುತ ಕರ್ನಾಟಕದಲ್ಲಿ ಗಾಂಧಿ ಎಂಬ ವಿಷಯ ಕುರಿತು ಬಸವಪ್ರಭು ಹೊಸಕೇರಿ ಹಾಗೂ ಕನ್ನಡ ಮಹಿಳಾ ಸಾಹಿತ್ಯದಲ್ಲಿ ಗಾಂಧಿ ಎಂಬ ವಿಷಯ ಕುರಿತು ಡಾ. ವಿನಯಾ ಒಕ್ಕುಂದ ಉಪನ್ಯಾಸ ನೀಡಲಿದ್ದಾರೆ. ಅದೇ ಸಮಯದಲ್ಲಿ ಮತ್ತೊಂದು ವೇದಿಕೆಯಲ್ಲಿ ಗುಜರಾತ್ ಮಕ್ಕಳ ಪ್ರತಿಭೋತ್ಸವ ಕಾರ್ಯಕ್ರಮ ಜರುಗಲಿದೆ. ಅದರಲ್ಲಿ ಚಿತ್ರಕಲಾ ಸ್ಪರ್ಧೆ ಜನ ಹಾಗೂ ಕರ್ನಾಟಕ ಕ್ವಿಜ್ ಸ್ಪರ್ಧೆಗಳು ನಡೆಯಲಿವೆ. ಅಂದು ಸಂಜೆ 5ಕ್ಕೆ  ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ರಂಗಾಯಣ ನಿರ್ದೇಶಕ ಎಸ್.ಐ. ಭಾವಿಕಟ್ಟಿ ಈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಅಂದು ಸಂಜೆ 6ಕ್ಕೆ ಸಮಾರೋಪ ಸಮಾರಂಭ ಜರುಗಲಿದ್ದು, ಕವಿಸಂ ಅಧ್ಯಕ್ಷ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಕವಿವಿ ಕುಲಪತಿ ಪ್ರೊ. ಎಚ್.ಬಿ. ವಾಲೀಕಾರ, ವಕೀಲ ಕೆ.ಬಿ. ನಾವಲಗಿಮಠ ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಶಿವಣ್ಣ ಬೆಲ್ಲದ, ಶಿವಾನಂದ ಭಾವಿಕಟ್ಟಿ, ಮೋಹನ ನಾಗಮ್ಮನವರ, ಗುರು ಹಿರೇಮಠ, ವಿಶ್ವೇಶ್ವರಿ ಹಿರೇಮಠ ಪತ್ರಿಕಾಗೋಷ್ಠಿಯಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.