ಬೇಡಿಕೆ ಈಡೇರಿಸಿ: ಪ್ರತಿಭಟನೆ
ಧಾರವಾಡ: ರಾಜ್ಯದಲ್ಲಿರುವ ಗುತ್ತಿಗೆದಾರರ ವಿವಿಧ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಜಿಲ್ಲಾ ಸಿವಿಲ್ ಗುತ್ತಿಗೆದಾರರ ಸಂಘದ ಸದಸ್ಯರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಇಲ್ಲಿನ ಕಡಪಾ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಸದಸ್ಯರು, ಸುಭಾಷ ರಸ್ತೆ, ಹಳೆ ಬಸ್ ನಿಲ್ದಾಣ, ಆಲೂರು ವೆಂಕಟರಾವ್ ವೃತ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿರುವ ಗುತ್ತಿಗೆದಾರರು ಅನೇಕ ಸಮಸ್ಯೆ ಎದುರಿಸುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಮರಳು ದೊರಕುತ್ತಿಲ್ಲ. ಜಲ್ಲಿ ಕ್ರಷರ್ಗಳು ಆಗಾಗ ಬಂದ್ ಆಗುತ್ತಿವೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ಕಚ್ಚಾ ಸಾಮಗ್ರಿಗಳ ಅಭಾವ ತಲೆದೂರಿದೆ. ಇವುಗಳಿಗೆ ಒಂದು ಸರಿಯಾದ ನೀತಿ ಅಳವಡಿಸುವ ಇಚ್ಛಾಶಕ್ತಿ ಸರ್ಕಾರಕ್ಕಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಗುತ್ತಿಗೆದಾರರ ಲೈಸನ್ಸ್ ಸತತವಾಗಿ ಚಾಲ್ತಿ ಇದ್ದಲ್ಲಿ ಗುತ್ತಿಗೆದಾರರು ಕಾಮಗಾರಿ ನಿರ್ವಹಿಸಿದ ಪ್ರಮಾಣ ಪತ್ರವನ್ನು ಅವರ ಜೀವಿತಾವಧಿಯ ಯಾವುದೇ ಟೆಂಡರ್ಗೆ ಅಂದರೆ 5 ವರ್ಷಗಳ ನಂತರವೂ ಸಹ ಪರಿಗಣಿಸಬೇಕು. ಗುತ್ತಿಗೆದಾರರ ಬಿಲ್ನಲ್ಲಿ ಕಟಾಯಿಸಿದ ಗುತ್ತಿಗೆದಾರರ ಕ್ಷೇಮನಿಧಿ ಹಣವನ್ನು ಈಗ ಗುತ್ತಿಗೆದಾರರು ಮೃತಪಟ್ಟರೆ ಮಾತ್ರ ನೀಡುತ್ತಿದ್ದಾರೆ. ಆದರೆ, ಗುತ್ತಿಗೆದಾರರು ಅಪಘಾತದಲ್ಲಿ ಅಥವಾ ಇನ್ನಿತರ ಯಾವುದೇ ಕಾಯಿಲೆಯಿಂದ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಸಂದರ್ಭದಲ್ಲಿ ಅವರ ಆಸ್ಪತ್ರೆ ಖರ್ಚನ್ನು ಈ ಹಣದಿಂದಲೇ ಭರಿಸುವಂತಾಗಬೇಕು ಎಂದು ಒತ್ತಾಯಿಸಿದರು.
ಸಂಘದ ಅಧ್ಯಕ್ಷ ಸುಭಾಷ ಪಾಟೀಲ, ಕಾರ್ಯದರ್ಶಿ ಸಿ.ಬಿ. ಮೊರಬದ, ಅಶ್ವಥ್ ಬೆಟಗೇರಿ, ಎಂ.ಐ. ದಾವಲನರ, ವಿ.ಎಸ್. ಪಾಟೀಲ, ಅಲ್ತಾಫ್ ನದಾಫ್, ಎನ್.ಎನ್. ಮಾಣಿಕ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

